ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ !

0 744

ಶಿವಮೊಗ್ಗ : ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

6 ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಆದೇಶ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

Leave A Reply

Your email address will not be published.

error: Content is protected !!