ಬಿರುಗಾಳಿ ಸಹಿತ ಮಳೆಗೆ ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ

ಹೊಸನಗರ: ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ರೋಡ್‌ನಲ್ಲಿ ಮಂಜುನಾಥ್‌ರವರ ಮನೆ ಹಾಗೂ ಕೊಟ್ಟಿಗೆ ಮೇಲೆ ಮರ ಮುರಿದ್ದು ಬಿದ್ದ ಘಟನೆ ವರದಿಯಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.

ಎರಡು ವರ್ಷಗಳ ಹಿಂದೆಯೇ ಮಳೆಗಾಲದಲ್ಲಿ ದೊಡ್ಡ ಗಾತ್ರದ ಮರಗಳು ಬೀಳುವ ಸಂಭವವಿದೆ ಎಂದು ಅರಣ್ಯ ಇಲಾಖೆಯವರಿಗೆ ಪದೇ-ಪದೇ ಲಿಖಿತ ದೂರು ನೀಡಿದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ನಮ್ಮ ಮನೆಯ ಸ್ವಲ್ಪ ಭಾಗ ಹಾಗೂ ಕೊಟ್ಟಿಗೆ ಕಳೆದುಕೊಳ್ಳುವ ಸ್ಥಿತಿ ಬಂದಿದೆ.

ಇನ್ನೂ ಕೆಲವು ಮರಗಳಿದ್ದು ಅವುಗಳು ಈ ವರ್ಷದ ಮಳೆ-ಗಾಳಿಗೆ ಬೀಳುವ ಸಂಭವವಿದ್ದು ಅದು ಸಹ ನಮ್ಮ ಮನೆಗೆ ಹಾನಿ ಮಾಡುವ ಸಂಭವವಿದ್ದು ತಕ್ಷಣ ಅರಣ್ಯ ಇಲಾಖೆ ಗಮನ ಹರಿಸಿ ಆ ಮರಗಳ ಕೊಂಬೆಗಳನ್ನು ಅಥವಾ ಮರಗಳನ್ನು ಕಡಿಸಲಿ ಎಂದು ಅರಣ್ಯ ಇಲಾಖೆಯವರಲ್ಲಿ ಮಂಜುನಾಥ್ ಮನವಿ ಮಾಡಿದ್ದು ಹಾನಿಯಾಗಿರುವ ಮನೆ-ಕೊಟ್ಟಿಗೆಗೆ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಈ ಮೂಲಕ ಮನವಿ ಮಾಡಿದರು.

Malnad Times

Recent Posts

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

41 mins ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

3 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

12 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

12 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

13 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

13 hours ago