ಶಿವಮೊಗ್ಗ: ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ .ಕೆ. ಹರಿಪ್ರಸಾದ್ ಬಹಿರಂಗವಾಗಿ ಹಗುರವಾಗಿ ಮಾತನಾಡುವುದು ತರವಲ್ಲ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಎಸ್.ಪಿ. ಶೇಷಾದ್ರಿ ಹೇಳಿದ್ದಾರೆ.
ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲದೆ ಇರಬಹುದು. ಆದರೆ ಇದನ್ನೇ ಇಟ್ಟುಕೊಂಡು ಅವರು ಕಾಂಗ್ರೆಸ್ ಸರ್ಕಾರದ ಅದರಲ್ಲೂ ಮುಖ್ಯಮಂತ್ರಿಗಳ ವಿರುದ್ದವಾಗಿ ಮಾತನಾಡುವುದರಲ್ಲಿ ಅರ್ಥವಿಲ್ಲ. ಸಿದ್ದರಾಮಯ್ಯ ಅವರು ಶೋಷಿತ ವರ್ಗದ ಧ್ವನಿಯಾಗಿದ್ದಾರೆ. ಅಹಿಂದ ಸಮಾವೇಶದ ಮೂಲಕ ನಾಡಿನ ಎಲ್ಲಾ ವರ್ಗಕ್ಕೆ ನ್ಯಾಯ ಒದಗಿಸಿದ್ದಾರೆ. ಆದರೆ ಸಣ್ಣ ಸಣ್ಣ ಜಾತಿಗಳಿಗೆ ಅವರಿಂದ ನ್ಯಾಯ ಸಿಕ್ಕಿಲ್ಲ ಎಂದು ಹರಿಪ್ರಸಾದ್ ಹೇಳುವಲ್ಲಿ ಯಾವ ಅರ್ಥವೂ ಇಲ್ಲ ಎಂದಿದ್ದಾರೆ.
ರಾಜ್ಯ ಸರ್ಕಾರ ಈಗಿನ್ನೂ ಟೇಕಾಫ್ ಆಗುತ್ತಿದೆ. ತನ್ನ ಗ್ಯಾರಂಟಿಗಳ ಮೂಲಕ ಬಡವರ, ಹಿಂದುಳಿದವರ ಕಲ್ಯಾಣಕ್ಕಾಗಿ ಅತ್ಯಂತ ಶ್ರಮದಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವನ್ನು ಪಕ್ಷದಲ್ಲಿದ್ದುಕೊಂಡು ಟೀಕಿಸುವುದು ವಿರೋಧ ಪಕ್ಷಗಳಿಗೆ ಆಹಾರವಾದಂತಾಗುತ್ತದೆ. ಏನೇ ಅಸಮಾಧಾನಗಳಿದ್ದರೂ ಅದಕ್ಕೆ ಪಕ್ಷದ ಚೌಕಟ್ಟಿದೆ. ಅದರೊಳಗೇ ಮಾತನಾಡಬೇಕಾಗುತ್ತದೆ. ಸ್ವಾಮೀಜಿಗಳ ಸಮ್ಮುಖದಲ್ಲಿ ಸಭೆ ಮಾಡುವುದು, ಟೀಕಿಸುವುದು ತರವಲ್ಲ. ಅದರ ಬದಲು ಹೈಕಮಾಂಡಿಗೆ ತಿಳಿಸಬಹುದು ಎಂದರು.
ರಾಜ್ಯದಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರೂ ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ಆ ಜಾತಿಗಳಿಗೆ ಅವಕಾಶ ಕೊಡಲಾಗಿದೆ. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡಿದ್ದಾರೆ. ಹೀಗಿದ್ದೂ ದಲಿತರಿಗೆ ಏನೂ ಮಾಡಿಲ್ಲ. ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಲ್ಲ ಎಂದು ಹೇಳುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವ ಅಥವಾ ಪಕ್ಷದೊಳಗೆ ಮತ್ಯಾರನ್ನೋ ಓಲೈಸುವ ಕೆಲಸ ಹರಿಪ್ರಸಾದ್ ಅಂತವರಿಗೆ ನ್ಯಾಯವಾದುದಲ್ಲ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…