Categories: Shivamogga

ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ FM ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ ; ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ನಗರದ ಜನತೆಯ ಬಹುದಿನದ ಬೇಡಿಕೆ ಆಗಿದ್ದ ಎಫ್.ಎಂ ಕೇಂದ್ರ 10 ವ್ಯಾಟ್ ನ ಎಫ್.ಎಂ ಕೇಂದ್ರವಾಗಿ ವಿಸ್ತರಣೆ ಹೊಂದಿದೆ. 1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗ ಭದ್ರಾವತಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಸ್ತುತ ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆಕಾಶವಾಣಿ ಮತ್ತು ಎಫ್.ಎಂ ರೇಡಿಯೋ ಸುಮಾರು 1 ಕೆವಿ ಸಾಮರ್ಥ್ಯ ಟ್ರಾನ್ಸ್‌ಮೀಟರ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಉನ್ನತೀಕರಣದ ನಂತರ ಇದರ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ.

ಇದರ ಪೂರ್ಣಪ್ರಮಾಣದ ಕಾರ್ಯಾರಂಭವಾದ ಮೇಲೆ ನಾವು ಕಾರಲ್ಲಿ ಪ್ರಯಾಣ ಮಾಡುವಾಗ ಶಿವಮೊಗ್ಗದ ಯಾವುದೇ ಮೂಲೆಗೆ ಸಮಾರು 150 ಕಿಲೋ ಮೀಟರವರೆಗೆ ರೇಡಿಯೋ ಕೇಳಿಕೊಂಡು ಹೋಗಬಹುದು.

ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತ್ಯಧಿಕ ಸಾಮರ್ಥ್ಯದ ಟ್ರಾನ್ಸ್‌ಮೀಟರ್ ಅಳವಡಿಕೆ ಕಾರ್ಯ ನಮ್ಮ ಶಿವಮೊಗ್ಗದಲ್ಲಿ ಆಗುತ್ತಿರುವುದು ನಮಗೆಲ್ಲ ಹೆಮ್ಮೆ ಹಾಗೂ ಸಂತೋಷ ತರುವ ವಿಚಾರವಾಗಿದೆ ಎಂದರು.

ಆಕಾಶವಾಣಿಗೆ 59 ವರ್ಷ ತುಂಬಿದ್ದು ಇಳಿ ವಯಸ್ಸಿನಲ್ಲಿ ಯೌವನ ಬಂದಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ ನಾಯಕತ್ವವು ನಮ್ಮ ಮಲೆನಾಡಿನ ಅಭಿವೃದ್ಧಿಗೆ ಸಹಕಾರಿಯಾಗಿದೆ. ಈ ಯೋಜನೆಗೆ ರೂ. 10 ಕೋಟಿ ಅನುದಾನ ನೀಡಲಾಗಿದ್ದು ಅನುಷ್ಠಾನದ ನಂತರ ತುಮಕೂರುವರೆಗೂ ರೇಡಿಯೋ ಸೇವೆ ದೊರೆಯಲಿದೆ. ಮೊಬೈಲ್ ನಲ್ಲೂ ಇಂಟರ್‌ನೆಟ್ ಇಲ್ಲದೆ ಬಳಸಬಹುದು. ನಮ್ಮ ಮಲೆನಾಡಿನ ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಹ ಸಹಕಾರಿ ಆಗಲಿದ್ದು ಮುಂದಿನ ದಿನಗಳಲ್ಲಿ ಭಾರತದಲ್ಲಿ ಅತೀ ದೊಡ್ಡ ಎಫ್.ಎಂ. ಕೇಂದ್ರ ಆಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭದ್ರಾವತಿ ಆಕಾಶವಾಣಿ ಸ್ಟುಡಿಯೋವನ್ನು ಮೇಲ್ದರ್ಜೆಗೇರಿಸಲಾಗುವುದು. ಈ ರೀತಿಯ ಯೋಜನೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರದ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು ಮಾತನಾಡಿ, ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳು ಈ ದೇಶದಲ್ಲಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಅಭಿವೃದ್ಧಿ ಚಿಂತನೆಯೊಂದಿಗೆ ಈ ರೀತಿಯ ಅನೇಕ ಯೋಜನೆಯನ್ನು ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ.

ಭದ್ರಾವತಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್ ಆರ್ ಭಟ್ ಅವರು ಮಾತನಾಡಿ, ನಮ್ಮ ಆಕಾಶವಾಣಿಗೆ ಹೊಸ ಹುರುಪು ಬರುತ್ತಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರ ಶ್ರಮ ಅತ್ಯಂತ ಅಮೂಲ್ಯವಾದದ್ದು ಎಂದು ಶ್ಲಾಘಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಅರುಣ್ ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷರಾದ ಜಗದೀಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಮತ್ತು ಗಣ್ಯರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago