Categories: Shivamogga

ಭದ್ರಾ ನಾಲೆ-ನದಿ ಪಾತ್ರದ ಸುತ್ತಮುತ್ತ ನಿಷೇಧಾಜ್ಞೆ, ಯಾಕೆ ಗೊತ್ತಾ ?

ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.

ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1.00 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ. ಆದರೆ ಸದರಿ ಜಿಲ್ಲೆಗಳ ನೀರು ಒದಗಿಸುವ ಜಾಕ್‍ವೆಲ್ ಸ್ಥಳವನ್ನು ನೀರು ತಲುಪಿರುವುದಿಲ್ಲವೆಂದು ತಿಳಿದುಬಂದಿದೆ.

ನದಿಯ ಪಾತ್ರದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಪಂಪ್‍ಸೆಟ್‍ಗಳನ್ನು ಅಳವಡಿಸಿ ಅಕ್ರಮವಾಗಿ ನೀರನ್ನೆತ್ತಿ ಬಳಸಿಕೊಳ್ಳುತ್ತಿರುವುದರಿಂದ ಹಾಗೂ ನದಿ ಪಾತ್ರದಲ್ಲಿ ಕೆಲವು ಗ್ರಾಮಗಳಲ್ಲಿ ನದಿಗೆ ಅಡ್ಡಲಾಗಿ ಅನಧಿಕೃತ ಮಣ್ಣಿನ/ಮರಳಿನ ಏರಿಯನ್ನು ನಿರ್ಮಿಸಿ ನೀರನ್ನು ಎತ್ತುತ್ತಿರುವುದರಿಂದ ನಿಗದಿತ ಪ್ರದೇಶಕ್ಕೆ ಜಲಾಶಯದಿಂದ ನೀರು ತಲುಪಿರುವುದಿಲ್ಲ.

2023-24ನೇ ಸಾಲಿಗೆ ಭದ್ರಾ ಕಾಲುವೆಯಲ್ಲಿ ಬೇಸಿಗೆ ಹಂಗಾಮಿಗೆ ನೀರನ್ನು ಹರಿಸುತ್ತಿದ್ದು, ಅಕ್ರಮ ಪಂಪ್‍ಸೆಟ್ ಅಳವಡಿಸಿ ನೀರನ್ನು ಎತ್ತಿ ಬಳಸುತ್ತಿರುವುದರಿಂದ ಅಚ್ಚುಕಟ್ಟು ಕೊನೆಯ ಭಾಗದವರಿಗೆ ನೀರು ಹರಿಸುವುದು ಕಷ್ಟಕರವಾಗಿದೆ ಹಾಗೂ ಕುಡಿಯುವ ನೀರು ಪೂರೈಸುವುದೂ ಕಷ್ಟವಾಗಿದೆ. ಆದ್ದರಿಂದ ಪಂಪ್‍ಸೆಟ್‍ಗಳನ್ನು ತೆರವುಗೊಳಿಸಿ ಅಚ್ಚುಕಟ್ಟು ಕೊನೆಯ ಭಾಗದವರಿಗೆ ಹಾಗೂ ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಭದ್ರಾ ನಾಲಾ ಮತ್ತು ನದಿ ಪಾತ್ರಗಳಲ್ಲಿ ಅಳವಡಿಸಿರುವ ಪಂಪ್‍ಸೆಟ್, ಡೀಸೆಲ್ ಜನ್‍ಸೆಟ್ ಮತ್ತು ಇತರೆ ಉಪಕರಣಗಳನ್ನು ತೆರವುಗೊಳಿಸಲು ಹಾಗೂ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ ಪ್ರದೇಶ ವ್ಯಾಪ್ತಿಯಲ್ಲಿ ಸಿ.ಆರ್‍.ಪಿ.ಸಿ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಕೋರಲಾಗಿರುತ್ತದೆ.

ಪ್ರಸ್ತುತ ರಾಜ್ಯ, ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದು ಕುಡಿಯುವ ನೀರಿಗೆ ತುಂಬಾ ಬೇಡಿಕೆ ಇದೆ. ಭದ್ರಾ ನಾಲಾ ಕಾಲುವೆಗಳಲ್ಲಿ ನೀರು ಹರಿಸುತ್ತಿರುವುದರಿಂದ ಕಾಲುವೆಗಳ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೇ ಒದಗಿಸುವುದಕ್ಕಾಗಿ ಹಾಗೂ ಕಾಲುವೆಗಳ ಪ್ರದೇಶದಲ್ಲಿ ಅನಧಿಕೃತವಾಗಿ ರೈತರರು ಹೊಲಗಳಿಗೆ ನೀರನ್ನು ಹರಿಸುವುದಾಗಲೀ ಅಥವಾ ಪಂಪ್‍ಸೆಟ್ ಮತ್ತು ತೂಬುಗಳ ಮೂಲನ್ನು ನೀರನ್ನು ಎತ್ತುವಳಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಫೆ.19 ರಿಂದ 26 ರವರೆಗೆ ಭದ್ರಾ ನಾಲಾ ಮತ್ತು ನದಿ ಪಾತ್ರ ಪ್ರದೇಶದ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ಸಿ.ಆರ್‍.ಪಿ.ಸಿ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago