ಭಾರತ ಮಾತೆಯನ್ನು ಅವಮಾನಿಸಿದರೆ ಅಂತವರನ್ನು ಗಲ್ಲಿಗೇರಿಸಿ ; ನಿಟ್ಟೂರು ಸುಬ್ರಹ್ಮಣ್ಯ

ಹೊಸನಗರ: ನಮ್ಮ ದೇಶ ಶಾಂತಿಪ್ರಿಯ ದೇಶ, ಇಲ್ಲಿ ಎಲ್ಲರೂ ಸೌಹಾರ್ಧತೆಯಿಂದ ಯಾವುದೇ ಜಾತಿ ಧರ್ಮ ಎಂದು ದ್ವೇಷ ಬೆಳೆಸದೆ ನಾವೆಲ್ಲರೂ ಒಗ್ಗಟ್ಟಾಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಲ್ಲಿ ವಿಷ ಬೀಜ ಬಿತ್ತಿ ದೇಶವನ್ನು ಅಶಾಂತಿಯತ್ತಾ ಸಾಗಿಸಲು ಹೊರಟಿದ್ದಾರೆ. ಭಾರತ ಮಾತೆಯನ್ನು ಅವಮಾನಿಸಿದರೆ ನಾವು ಎಂದಿಗೂ ಸಹಿಸುವುದಿಲ್ಲ. ಭಾರತ ಮಾತೆಯನ್ನು ಅವಮಾನಿಸುವವರನ್ನು ನಮ್ಮ ದೇಶವನ್ನು ಅಪಮಾನಿಸುವವರನ್ನೂ ತಕ್ಷಣ ಗಲ್ಲಿಗೇರಿಸಬೇಕೆಂದು ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ ಹೇಳಿದರು.

ಪಟ್ಟಣದ ಮಾವಿನಕೊಪ್ಪದಿಂದ ಬಸ್ ನಿಲ್ದಾಣ ಆವರಣದವರೆಗೆ ಬಿಜೆಪಿ ಯುವ ಮೋರ್ಚ ಹೊಸನಗರ ಮಂಡಲದಿಂದ ದೇಶ ಮೊದಲು ಎಂಬ ಘೋಷಣೆಯೊಂದಿಗೆ ತ್ರಿವರ್ಣ ಧ್ವಜದೊಂದಿಗೆ ಒಂದು ನಡುಗೆ ಸದೃಢ ಭಾರತಕ್ಕಾಗಿ ಸುರಕ್ಷಿತ ಕರ್ನಾಟಕ ಎಂಬ ಘೋಷಣೆಯೊಂದಿಗೆ ಮೆರವಣಿಗೆ ನಡೆಸಿ ಬಸ್ ನಿಲ್ದಾಣ ಆವರಣದಲ್ಲಿ ಸಭೆ ನಡೆಸಿ ಮಾತನಾಡಿದರು.

ಇತ್ತೀಚೆಗೆ ಬೆಂಗಳೂರು ವಿಧಾನಸಭೆಯ ಆವರಣದಲ್ಲಿ ನಾಸೀರ್ ಹುಸೇನ್ ಗೆದ್ದ ಸಂದರ್ಭದಲ್ಲಿ ನಮ್ಮ ಶತ್ರು ದೇಶದ ಪರ ಕಿಡಿಗೇಡಿಗಳು ಜಯಘೋಷ ಕೂಗಿದ್ದಾರೆ. ಇಂಥವರ ವಿರುದ್ಧ ನಮ್ಮ ಭ್ರಷ್ಠ ರಾಜ್ಯ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಇಂಥಹ ದೇಶ ವಿರೋಧಿಗಳನ್ನು ಸುಮ್ಮನೆ ಬಿಟ್ಟರೇ ಮುಂದೊಂದು ದಿನ ನಮ್ಮ ಭಾರತ ದೇಶಕ್ಕೆ ಕಂಠಕವಾಗುವುದರಲ್ಲಿ ಅನುಮಾನವಿಲ್ಲ. ತಕ್ಷಣ ದೇಶಕ್ಕೆ ಅವಮಾನ ಮಾಡುವವರನ್ನು ಬಂಧಿಸಬೇಕೆ‌ಂದರು.

ತಾಲ್ಲೂಕು ಬಿಜೆಪಿ ಮಾಜಿ ಅದ್ಯಕ್ಷ ಗಣಪತಿ ಬಿಳಗೋಡು ಮಾತನಾಡಿ, ಭಾರತ ದೇಶದಲ್ಲಿರುವ ಎಲ್ಲ ಮುಸ್ಲಿಂಮರು ಕೆಟ್ಟವರಲ್ಲ ಕೆಲವು ಮುಸ್ಲಿಂ ಬಂಧುಗಳು ದೇಶದ ಸ್ವಾತಂತ್ರ್ಯದಲ್ಲಿ ಭಾಗವಹಿಸುವುದರ ಜೊತೆಗೆ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ರಾಜಕೀಯ ಪಿತೂರಿಯಿಂದ ದೇಶದಲ್ಲಿ ಅಶಾಂತಿ ಸೃಷ್ಠಿಸಲು ಹೊರಟಿರುವುದು ಮತ್ತು ಮುಸ್ಲಿಂ ಜನಾಂಗವನ್ನು ಒಲೈಸುತ್ತಿರುವುದು ನಾಚಿಗೆಗೇಡಿನ ಸಂಗತಿಯಾಗಿದ್ದು ಈ ರೀತಿ ಸೃಷ್ಠಿಕರಿಸಿ ಬೆಳೆಸುತ್ತಿರುವ ರಾಜಕೀಯ ಮುಖಂಡರಿಗೆ ಒಂದಲ್ಲ ಒಂದು ದಿನ ಅವರೇ ಇವರಿಗೆ ಶತ್ರುವಾಗುವುದರಲ್ಲಿ ಅನುಮಾನವಿಲ್ಲ. ತಕ್ಷಣ ವಿಧಾನಸಭೆಯಲ್ಲಿ ಶತ್ರು ದೇಶದ ಪರ ಘೋಷಣೆ ಕೂಗಿರುವವರನ್ನು ಬಂಧಿಸಬೇಕು ಮತ್ತು ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದವರನ್ನು ಬಂಧಿಸಿ ತಕ್ಕ ಶಿಕ್ಷೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್, ಅಭಿಷೇಕ್, ಚಿಕ್ಕನಕೊಪ್ಪ ಶ್ರೀಧರ, ಬಿಜೆಪಿ ಯುವ ಘಟಕದ ಅಧ್ಯಕ್ಷ ಉಪಾಧ್ಯಕ್ಷ ಕಾರ್ಯದರ್ಶಿಗಳು ಸದಸ್ಯರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago