ಭೀಕರ ರಸ್ತೆ ಅಪಘಾತ ; ಭದ್ರಾವತಿ ಶಾಸಕರ ಆಪ್ತ ಸಹಾಯಕ ದುರ್ಮರಣ !


ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್ (47) ಅವರು ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ.


ತಡರಾತ್ರಿ 9 ಗಂಟೆ ವೇಳೆಗೆ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಈಶ್ವರ್ ಮೃತಪಟ್ಟಿದ್ದಾರೆ.
ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿದ್ದ ಈಶ್ವರ್, ಕೆಲಸ ಮುಗಿಸಿಕೊಂಡು ಭದ್ರಾವತಿಗೆ ಹಿಂತಿರುಗುತ್ತಿದ್ದ ವೇಳೆ ಲಾರಿಯೊಂದು ಬೈಕ್’ಗೆ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಈಶ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಈಶ್ವರ್ ಅವರ ಪಾರ್ಥಿವ ಶರೀರವನ್ನು ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.


ಈಶ್ವರ್ ಅವರ ಅಕಾಲಿಕ ನಿಧನ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಕುಟುಂಬಸ್ಥರಿಗೂ ಸಹ ಆಘಾತ ನೀಡಿದ್ದು, ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago