ಭೌತಿಕ ಬೆಳವಣಿಗೆಯ ಜೊತೆಗೆ ಬೌದ್ಧಿಕ ಬೆಳವಣಿಗೆ ಅಗತ್ಯ ; ಡಾ.ಕೆ.ವಿ.ಪತಂಜಲಿ

ಹೊಸನಗರ : ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಆಯುರ್ವೇದ ವೈದ್ಯ ಡಾ.ಕೆ.ವಿ.ಪತಂಜಲಿ ಹೇಳಿದರು.

ಅವರು ತಾಲೂಕಿನ ಪುರಪ್ಪೆಮನೆಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ 14 ಲಕ್ಷ ರೂ. ಕೊಡುಗೆಯಲ್ಲಿ ನಿರ್ಮಿಸಿದ ನೂತನ ಅನ್ನಪೂರ್ಣ ಭೋಜನಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರತಿ ಗ್ರಾಮಕ್ಕೂ ವಾಚನಾಲಯ, ಚಿಕಿತ್ಸಾಲಯ, ಭೋಜನಾಲಯ, ಶೌಚಾಲಯ ಹಾಗೂ ವಿದ್ಯಾಲಯಗಳು ಇದ್ದಲ್ಲಿ, ಗ್ರಾಮದ ಸಮಗ್ರ ಅಭಿವೃದ್ಧಿ ಸಾಧ್ಯ. ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳುವುದರಿಂದ ಶೈಕ್ಷಣಿಕ ಪ್ರಗತಿ ಕಂಡುಕೊಳ್ಳಲು ಸಾಧ್ಯವಿದೆ. ಭೌತಿಕ ಬೆಳವಣಿಗೆಯ ಜೊತೆಗೆ ಬೌದ್ಧಿಕ ಬೆಳವಣಿಗೆ ಅಗತ್ಯ ಎಂದರು.

2000ನೇ ಇಸವಿ ಬಳಿಕ ದೇಶದಲ್ಲಿ ಜಾರಿಗೊಂಡ ಸರ್ವಶಿಕ್ಷಣ ಅಭಿಯಾನದಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಿನ್ನೆಡೆ ಉಂಟಾಗಿದೆ. ಶಿಕ್ಷಣ ತಜ್ಞರು ಜಾರಿಗೊಳಿಸಿರುವ ಶಿಕ್ಷಣ ನೀತಿಯ ಲೋಪಗಳಿಂದ ಇಂದು ಸರಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರ ಫಲವಾಗಿ ಔದ್ಯೋಗಿಕ ರಂಗದಲ್ಲಿ ಯಶಸ್ಸು ದೊರಕುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪುರಪ್ಪೆಮನೆಯ ಸರ್ಕಾರಿ ಶಾಲೆ ಹಲವು ವರ್ಷಗಳಿಂದ ನಿರಂತರವಾಗಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳ್ಳಲು ಪೂರಕ ವಾತಾವರಣ ಕಲ್ಪಿಸಿದೆ. ಇದರ ಫಲವಾಗಿ ಶೈಕ್ಷಣಿಕ ಸಾಧನೆಯ ಪಟ್ಟಿಯಲ್ಲಿ ಇಂದು ಜಿಲ್ಲೆಯಲ್ಲಿಯೇ ಎರಡನೇ ಸ್ಥಾನ ಪಡೆದಿರುವು ಶ್ಲಾಘನೀಯ ಎಂದರು.

ಬರುವ ಬೇಸಿಗೆ ರಜೆಯಲ್ಲಿ ಪ್ರತಿದಿನ ದಿನಪತ್ರಿಕೆ ಹಾಗೂ ಕನಿಷ್ಠ 20 ಪುಸ್ತಕ ಓದುವ ಪ್ರತಿ ವಿದ್ಯಾರ್ಥಿಗೆ ತಲಾ 1 ಸಾವಿರ ರೂ. ಧನಸಹಾಯ ನೀಡುವ ಭರವಸೆ ನೀಡಿದರು.

ಹಳೆ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯದರ್ಶಿ ಮೃತ್ಯುಂಜಯ ಮಾತನಾಡಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಇಂತಹ ಕರ‍್ಯಕ್ರಮಗಳು ಆಗಬೇಕು. ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕೈಗೊಳ್ಳುವಲ್ಲಿ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ಪೋಷಕರೇ ಇಲ್ಲಿ ಭೋಜನಾಲಯ ನಿರ್ಮಿಸಿರುವುದು ಗಮನಾರ್ಹವಾಗಿದೆ ಎಂದರು.

ಬಿಇಒ ಎಚ್.ಆರ್.ಕೃಷ್ಣಮೂರ್ತಿ ಮಾತನಾಡಿ, ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಮೊದಲು ಮಾದರಿಯಾಗಬೇಕು ಎಂದರು.

ಶಾಲಾಸಮಿತಿ ಅಧ್ಯಕ್ಷ ಎಂ.ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ದಿನೇಶ್, ಉಪಾಧ್ಯಕ್ಷ ರಾಘವೇಂದ್ರ, ಸದಸ್ಯರಾದ ಅನ್ನಪೂರ್ಣಮ್ಮ, ರಾಘವೇಂದ್ರ, ಮಹಾಲಕ್ಷ್ಮಿ, ಸಂತೋಷ, ಜಯಲಕ್ಷ್ಮಿ, ಜಯಪ್ರಕಾಶ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಜಿ.ಚಂದ್ರಮೌಳಿ, ಭೂದಾನಿ ಶಂಕರನಾರಾಯಣ ಹೆಗಡೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜ ಎಸ್.ಪಿ, ಶಿಕ್ಷಕರ ಸಂಘದ ಅಧ್ಯಕ್ಷ ಕುಬೆಂದ್ರಪ್ಪ, ಉಪಾಧ್ಯಕ್ಷ ಮಹಮದ್ ಅಲ್ತಾಫ್, ಸಿಆರ್‌ಪಿ, ಅರವಿಂದ ಮತ್ತಿತರರು ಉಪಸ್ಥಿತರಿದ್ದರು. ಪ್ರಸನ್ನಕುಮಾರ್ ನಿರೂಪಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago