Categories: Shivamogga

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆ 2ನೇ ಸ್ಥಾನ ತಲೆ ತಗ್ಗಿಸಬೇಕಾದ ಸಂಗತಿ ; ಮಂಜುನಾಥ್ ನಾಯ್ಕ


ಶಿವಮೊಗ್ಗ: ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದೆರೆ ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಇದು ನಾಗರೀಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯ್ಕರವರು ಖೇದ ವ್ಯಕ್ತಪಡಿಸಿದರು.


ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಿಮ್ಸ್ ಸಭಾಂಗಣದಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳಿಗೆ ಪೋಕ್ಸೋ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಪ್ರಸಕ್ತ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ವಿಷಾಧಕರ. ಇಂದು ಸ್ವಸ್ಥ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬ ನಾಗರೀಕನೂ ಸಾಮಾಜಿಕ ಜವಾಬ್ಧಾರಿಗಳನ್ನು ಹೊಂದಬೇಕು. ಪೋಕ್ಸೋ ಪ್ರಕರಣಗಳಲ್ಲಿ ಅಪರಾಧಿಗೆ ಶಿಕ್ಷೆಯಾಗಬೇಕಾದರೆ ಮತ್ತು ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕಾದರೆ ವೈದ್ಯಾಧಿಕಾರಿಗಳು ನೀಡುವ ವರದಿ ತುಂಬಾ ಮಹತ್ವದ್ದಾಗಿದೆ. ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ತಮ್ಮ ಹೇಳಿಕೆ ಮಹತ್ವ ಪೂರ್ಣವಾಗಿದೆ. ತಮ್ಮ ಪ್ರಾಮಾಣಿಕ ಕಳಕಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ನ್ಯಾಯಾಧೀಶ ಮೋಹನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಚಂದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಸಿದ್ಧನಗೌಡ ಪಾಟೀಲ್, ವೈದ್ಯಾಧಿಕಾರಿ ಡಾ|| ನಾಗರಾಜ್ ನಾಯ್ಕ್, ಸಿಮ್ಸ್ ನಿರ್ದೇಶಕ ವಿರುಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಶ್ರೀಧರ್ ಹಾಗೂ ಶ್ರೀಮತಿ ಪ್ರಿಯಾಂಕ ಉಪಸ್ಥಿತರಿದ್ದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

8 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

8 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

9 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

9 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

11 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

15 hours ago