Categories: Shivamogga

ಮಗನ ಚಿಕಿತ್ಸೆಗೆ ಸಹಾಯ ಹಸ್ತ ನೀಡುವ ಮೂಲಕ ಜೀವ ಉಳಿಸಿ ; ಪೋಷಕರ ಮನವಿ

ಶಿವಮೊಗ್ಗ: ಥಲಸ್ಸೇಮಿಯಾ (ಬೋನ್ ಮ್ಯಾರೋ) ಕಾಯಿಲೆಯಿಂದ ಬಳಲುತ್ತಿರುವ ನನ್ನ ಮಗನ ಚಿಕಿತ್ಸೆಗೆ ಸಹಾಯ ಹಸ್ತ ನೀಡಿ ಮಗುವಿನ ಜೀವ ಉಳಿಸುವಂತೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರಲ್ಲಿ ಬಾಲಕನ ತಂದೆ ಹೆಚ್.ಎನ್. ರವೀಂದ್ರ ಮನವಿ ಮಾಡಿಕೊಂಡರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ವರ್ಕಾಟೆ ಗ್ರಾಮದಲ್ಲಿ ವಾಸವಾಗಿರುವ ನಮ್ಮ ಕುಟುಂಬ ಬಡತನದಲ್ಲಿದ್ದು, ನಮ್ಮ 11 ವರ್ಷದ ಮಗ ಸವಿನ್ ಹುಟ್ಟಿನಿಂದಲೂ ಥಲಸ್ಸೇಮಿಯಾ ಎಂಬ ಮಾರಣಾಂತಿಕ ರಕ್ತ ಉತ್ಪತ್ತಿ ಇಲ್ಲದ ಕಾಯಿಲೆಯಿಂದ ಬಳಲುತ್ತಿದ್ದು, ಪ್ರತಿ 20 ದಿನಕ್ಕೊಮ್ಮೆ ಶಿವಮೊಗ್ಗಕ್ಕೆ ಬಂದು ರಕ್ತ ಹಾಕಿಸಿಕೊಂಡು ಹೋಗುತ್ತಿದ್ದೇವೆ ಎಂದರು.


ಮಗನ ಶಸ್ತ್ರ ಚಿಕಿತ್ಸೆಗಾಗಿ ಸುಮಾರು 41 ಲಕ್ಷ ರೂ. ಖರ್ಚಾಗಲಿದೆ ಎಂದು ಬೆಂಗಳೂರಿನ ನಾರಾಯಣ ಹೃದಯಾಲಯದ ಆಸ್ಪತ್ರೆಯವರು‌ ತಿಳಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬದವನಾಗಿದ್ದು, ನನಗೆ ಇಷ್ಟೊಂದು ಮೊತ್ತದ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ. ನನ್ನ ಕುಟುಂಬಕ್ಕೆ ಧೈರ್ಯ ಮತ್ತು ಆರ್ಥಿಕವಾಗಿ ಸಹಾಯ ಮಾಡಲಿಚ್ಛಿಸು ವವರು ದಯಮಾಡಿ ಎನ್.ಆರ್. ಪುರದ ಇಂಡಿಯನ್ ಬ್ಯಾಂಕ್
ಅಕೌಂಟ್ ನಂ. 305522010000538, ಐಎಫ್‌ಎಸ್‌ಸಿ ಕೋಡ್ ಯುಬಿಐಎನ್-0930555ಗೆ ಗೂಗಲ್ ಅಥವಾ ಫೋನ್ ಪೇ ಬಳಸಿ (ಮೊ-9483813812) ಹಣ ಸಹಾಯ ಮಾಡುವಂತೆ ಮನವಿ ಮಾಡಿಕೊಂಡರು.
ಪುತ್ರ ಸವಿನ್ ಹಾಗೂ ಪತ್ನಿ ಉಪಸ್ಥಿತರಿದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

2 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

15 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

18 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

18 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

23 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago