Categories: RipponpeteShivamogga

ಮಣ್ಣಿನ ಹಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ

ರಿಪ್ಪನ್‌ಪೇಟೆ: ನಮ್ಮಲ್ಲಿರುವ ಅಂಧಕಾರದ ಕತ್ತಲು ದೂರ ಮಾಡಿ ಬೆಳಕು ಮೂಡಿಸುವುದೇ ಕಾರ್ತಿಕ ದೀಪೋತ್ಸವ ಮಣ್ಣಿನ ಹಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ಮಾವಿನಹೊಳೆಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇಂದಿನ ಯುವಜನಾಂಗ ಧರ್ಮ ಧಾರ್ಮಿಕ ಅಚರಣೆಗಳಿಂದ ದೂರವಾಗುತ್ತಿದ್ದು ಸಂಸ್ಕೃತಿ ಸಂಸ್ಕಾರವಿಲ್ಲದೆ ಮನೆಯ ಹಿರಿಯರನ್ನು ವೃದ್ದಾಶ್ರಮಕ್ಕೆ ಬಿಡುವುದರ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ತಂದೆ ತಾಯಿಯರವನ್ನು ಮನೆಯಲ್ಲಿಟ್ಟುಕೊಂಡು ನೋಡಿಕೊಳ್ಳುವಂತೆ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹಿರೇಮಣತಿ, ಹಾಲೇಶಪ್ಪ, ಜೆ.ಎಸ್.ಚಂದ್ರಪ್ಪ, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಚಂದ್ರಮೌಳಿಗೌಡ, ಬಿ.ಯುವರಾಜಗೌಡ, ಮಲ್ಲಿಕಾರ್ಜುನಯ್ಯ, ರುದ್ರಪ್ಪಗೌಡರು ಜಬ್ಬಗೋಡು, ಎತ್ತಿಗೆ ಮಹೇಶಗೌಡ, ರಾಜಶೇಖರಗೌಡ, ಬಿ.ಜೆ.ಜಗದೀಶಗೌಡ, ತಮ್ಮಣ್ಣಗೌಡ, ಇನ್ನಿತರ ಮಠದ ಸದ್ಭಕ್ತರು ಪಾಲ್ಗೊಂಡಿದ್ದರು.

ದೀಪೋತ್ಸವದ ನಂತರ ಜಾನಪದ ಕಲಾವಿದರಿಂದ ಬಸವಣ್ಣನವರ ವಚನ ಗಾಯನ ಮತ್ತು ಕೊಡಚಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

13 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

15 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

23 hours ago