ಮಧು ಬಂಗಾರಪ್ಪನವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಹರತಾಳು ಹಾಲಪ್ಪ ಆಗ್ರಹ

0 281

ಶಿವಮೊಗ್ಗ : ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರನ್ನು ಮುಖ್ಯಮಂತ್ರಿ ಸಿದ್ದರಾಮ್ಯನವರು ಸಂಪುಟದಿಂದ ವಜಾ ಮಾಡುವಂತೆ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ (Harathalu Halappa) ಆಗ್ರಹಿಸಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ರೀತಿಯಲ್ಲಿ ಅವರು ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ. ಹೀಗಾಗಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದನ್ನು ಸಹಿಸದೆ ಅಧಿಕಾರಿಗಳಿಗೆ ಧಮಕಿ ಹಾಕುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಹಾಗೂ ತಲುಪಿಸುವ ಬಗ್ಗೆಯೂ ಎಲ್ಲಾ ಗ್ರಾಪಂಗಳಲ್ಲಿ ವಿಕಸಿತ ಭಾರತ ಯಾತ್ರೆ ನಡೆಸಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಕ್ಯಾಬಿನೆಟ್ ಸಚಿವರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.

ನೌಕರರನ್ನು ವಿಕಸಿತ ಭಾರತ ಯಾತ್ರೆಗೆ ಕಳಿಸಿದಂತೆ ಜಿಪಂ ಸಿಇಓಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ
ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬಾರದೆಂದರೆ ಅದನ್ನು ಸಚಿವರು ಹೇಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ಶಿವರಾಜ್, ರಾಜನಂದಿನಿ ಕಾಗೋಡು, ರುದ್ರೇಶ್ ಇದ್ದರು.

Leave A Reply

Your email address will not be published.

error: Content is protected !!