Categories: Shivamogga

ಮಧು ಬಂಗಾರಪ್ಪನವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಹರತಾಳು ಹಾಲಪ್ಪ ಆಗ್ರಹ

ಶಿವಮೊಗ್ಗ : ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರನ್ನು ಮುಖ್ಯಮಂತ್ರಿ ಸಿದ್ದರಾಮ್ಯನವರು ಸಂಪುಟದಿಂದ ವಜಾ ಮಾಡುವಂತೆ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ (Harathalu Halappa) ಆಗ್ರಹಿಸಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ರೀತಿಯಲ್ಲಿ ಅವರು ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆಯಾಗಿದೆ. ಹೀಗಾಗಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದನ್ನು ಸಹಿಸದೆ ಅಧಿಕಾರಿಗಳಿಗೆ ಧಮಕಿ ಹಾಕುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಹಾಗೂ ತಲುಪಿಸುವ ಬಗ್ಗೆಯೂ ಎಲ್ಲಾ ಗ್ರಾಪಂಗಳಲ್ಲಿ ವಿಕಸಿತ ಭಾರತ ಯಾತ್ರೆ ನಡೆಸಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಕ್ಯಾಬಿನೆಟ್ ಸಚಿವರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.

ನೌಕರರನ್ನು ವಿಕಸಿತ ಭಾರತ ಯಾತ್ರೆಗೆ ಕಳಿಸಿದಂತೆ ಜಿಪಂ ಸಿಇಓಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ
ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬಾರದೆಂದರೆ ಅದನ್ನು ಸಚಿವರು ಹೇಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ಶಿವರಾಜ್, ರಾಜನಂದಿನಿ ಕಾಗೋಡು, ರುದ್ರೇಶ್ ಇದ್ದರು.

Malnad Times

Recent Posts

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

9 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

10 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

11 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

21 hours ago