Categories: Shivamogga

ಮನೆಗಳನ್ನು ಬೆಳಗುತ್ತಿರುವ ‘ಗೃಹಜ್ಯೋತಿ’ ಯೋಜನೆ

ಶಿವಮೊಗ್ಗ : ಹಣದುಬ್ಬರದಿಂದ ತತ್ತರಿಸಿರುವ ಜನಸಾಮಾನ್ಯರ ಆಶಾಕಿರಣ ‘ಗೃಹಜ್ಯೋತಿ’ ಯೋಜನೆ. ಈ ಯೋಜನೆಯಡಿ ಪ್ರತಿ ಗೃಹ ಬಳಕೆದಾರರು ಗರಿಷ್ಟ 200 ಯುನಿಟ್‍ವರೆಗೆ ವಿದ್ಯುತ್‍ನ್ನು ಉಚಿತವಾಗಿ ಪಡೆಯುವರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯು ಬೆಲೆ ಏರಿಕೆಯಿಂದ ಬಳಲುತ್ತಿರುವ ಜನ ಸಾಮಾನ್ಯರಿಗೆ ವರದಾನವಾಗಿದೆ.ಗೃಹಜ್ಯೋತಿ ಅನುಷ್ಟಾನದಲ್ಲಿ ಅತ್ಯಂತ ಸರಳ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.


ರಾಜ್ಯದ ಎಲ್ಲಾ ಗೃಹ ಬಳಕೆ ವಿದ್ಯುತ್ ಗ್ರಾಹಕರು ಈ ಯೋಜನೆಗೆ ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಕೆ ಚಾಲನೆಗೊಂಡ ದಿನದಿಂದ ಈವರೆಗೆ ಉತ್ತಮ ಸ್ಪಂದನೆ ದೊರತಿದೆ.
2022-23 ನೇ ಸಾಲಿನಲ್ಲಿ ಗೃಹ ವಿದ್ಯುತ್ ಬಳಕೆಯ ಸರಾಸರಿ ಹಾಗೂ ಹೆಚ್ಚುವರಿಯಾಗಿ ಶೇ.10 ರಷ್ಟು ಯುನಿಟ್ ಲೆಕ್ಕ ಹಾಕಿದಾಗ ಒಟ್ಟು ಬಳಕೆಯ ಸರಾಸರಿ 200 ಯುನಿಟ್‍ಗಿಂತ ಕಡಿಮೆ ಇದ್ದವರಿಗೆ ಈ ಯೋಜನೆಯ ಲಾಭ ದೊರೆಯಲಿದೆ.
ಈ ಯೋಜನೆಯು 2023 ರ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಅನ್ವಯವಾಗಿದ್ದು, 1ನೇ ಆಗಸ್ಟ್ ಹಾಗೂ ನಂತರದ ಮಾಪಕ ಓದುವ ದಿನಾಂಕದಿಂದ ಅನುಷ್ಟಾನಗೊಂಡಿದೆ.

ಸರಳ ನೋಂದಣಿ:

ಈ ಯೋಜನೆಯ ಅನುಷ್ಟಾನಕ್ಕೆ ಅತ್ಯಂತ ಸರಳ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪ್ರತಿ ಗೃಹ ಬಳಕೆದಾರು ಸೇವಾಸಿಂಧು ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳಬೇಕು. ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾ.ಪಂ, ನಾಡ ಕಚೇರಿ ಅಥವಾ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.

ಸಲ್ಲಿಸಬೇಕಾದ ದಾಖಲೆಗಳು: ನೋಂದಣಿ ಸಂದರ್ಭದಲ್ಲಿ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ/ಬಾಡಿಗೆ/ಭೋಗ್ಯದ ಕರಾರು ಪತ್ರ(ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಅಥವಾ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಸಲ್ಲಿಸಬೇಕು.

“ಗೃಹಜ್ಯೋತಿ ಯೋಜನೆಗೆ ಶಿವಮೊಗ್ಗ ವೃತ್ತದ ವ್ಯಾಪ್ತಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಶೇ.80 ರಷ್ಟು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ದಿ: 20-08-2023 ರವರೆಗೆ ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಒಟ್ಟು 2,63,400 ಗ್ರಾಹಕರಿಗೆ ಗೃಹಜ್ಯೋತಿ ಬಿಲ್ಲುಗಳನ್ನು ವಿತರಿಸಲಾಗಿದೆ. ಒಟ್ಟು 205992 ಗ್ರಾಹಕರಿಗೆ ಶೂನ್ಯ ಬಿಲ್ಲುಗಳನ್ನು ವಿತರಿಸಲಾಗಿದೆ. ಶೂನ್ಯ ಬಿಲ್ ಸಬ್ಸಿಡಿ ಮೊತ್ತ ರೂ. 5,39,54,539 ಆಗಿರುತ್ತದೆ. 57408 ಗ್ರಾಹಕರಿಗೆ ನೆಟ್ ಬಿಲ್‍ಗಳನ್ನು ನೀಡಲಾಗಿದ್ದು, ನೆಟ್ ಬಿಲ್ ಸಬ್ಸಿಡಿ ಮೊತ್ತ ರೂ. 2,59,21,565 ಆಗಿರುತ್ತದೆ.”
– ನಾಮದೇವ.ಎನ್.ವಿ, ಉಪ ನಿಯಂತ್ರಣಾಧಿಕಾರಿ, ಶಿವಮೊಗ್ಗ ವೃತ್ತ, ಮೆಸ್ಕಾಂ

ಗೃಹ ವಿದ್ಯುತ್ ಬಳಕೆದಾರರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದ್ದು, ವಾಣಿಜ್ಯ ಬಳಕೆದಾರರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಬಾಡಿಗೆದಾರು, ವಸತಿ ಸಮುಚ್ಚಯ (ಅಪಾರ್ಟ್‍ಮೆಂಟ್) ಮಾಲಿಕರು ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಸಿದ್ದರೆ ಈ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿದೆ.
ಯೋಜನೆಯ ಫಲಾನುಭವಿಯಾಗಿ ನಿಗದಿಪಡಿಸಿರುವ ವಿದ್ಯುತ್‍ಗಿಂತ ಹೆಚ್ಚುವರಿ ಯೂನಿಟ್ ವಿದ್ಯುತ್ ಬಳಸಿದರೆ, ಹೆಚ್ಚುವರಿ ಯೂನಿಟ್ ಗೆ ಬಿಲ್ಲನ್ನು ಪಾವತಿಸಬೇಕು.
ಮಾಸಿಕ ಬಳಕೆಯು 200 ಯೂನಿಟ್‍ಗಿಂತ ಹೆಚ್ಚಿದ್ದರೆ, ಆ ನಿರ್ದಿಷ್ಟ ತಿಂಗಳಿಗೆ ಸಂಪೂರ್ಣ ಬಿಲ್ಲನ್ನು ಪಾವತಿಸಬೇಕು. ಹೊಸ ಬಳಕೆದಾರರಿಗೆ ರಾಜ್ಯದ ವಿದ್ಯುತ್ ಬಳಕೆಯ ಸರಾಸರಿ ಯೂನಿಟ್ ಆಧಾರವಾಗಿಟ್ಟುಕೊಂಡು ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ಬಳಿಕ ದತ್ತಾಂಶವನ್ನು ಆಧರಿಸಿ ಯೂನಿಟ್ ನಿಗದಿಪಡಿಸಲಾಗುತ್ತದೆ.


ಗೃಹಜ್ಯೋತಿ ಸೇರಿದಂತೆ ಜಾರಿಯಾಗಿರುವ ಇತರೆ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ. ಆ.28 ಕ್ಕೆ ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಸರ್ಕಾರದ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಅತ್ಯುತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ಜನರಿಂದ ಲಭ್ಯವಾಗಿದೆ.

“ಗೃಹಜ್ಯೋತಿ ಯೋಜನೆ ನಿಜಕ್ಕೂ ನಮ್ಮ ಮನೆ ಬೆಳಗಿದೆ. ಬಡತನದ ಹಿನ್ನೆಲೆ ಕರೆಂಟ್ ಬಿಲ್ ಕಟ್ಟಲು ಬಹಳ ಕಷ್ಟವಾಗುತ್ತಿತ್ತು. ಈ ತಿಂಗಳು ಶೂನ್ಯ ಬಿಲ್ ಬಂದಿದ್ದು ನಿಟ್ಟುಸಿರು ಬಿಡುವಂತೆ ಆಗಿದೆ. ಸರ್ಕಾರಕ್ಕೆ ಧನ್ಯವಾದಗಳು.”
– ಧನಂಜಯಪ್ಪ, ಹೊಳಲೂರು, ಫಲಾನುಭವಿ

“ಆರ್ಥಿಕವಾಗಿ ಹಿಂದುಳಿದಿರುವ ಮಧ್ಯಮ ವರ್ಗದ ನಮ್ಮಂತಹ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆ ವರದಾನವಾಗಿದೆ. ಕರೆಂಟ್ ಬಿಲ್ ಕಟ್ಟುವುದು ತಪ್ಪಿರುವುದರಿಂದ ಅದೇ ಮೊತ್ತವನ್ನು ಕುಟುಂಬ ನಿರ್ವಹಣೆ ಇತರೆ ಖರ್ಚಿಗೆ ಬಳಕೆ ಮಾಡಿಕೊಳ್ಳುತ್ತೇವೆ.”
– ಮಂಜುಳ, ತ್ಯಾವರೆಚಟ್ನಹಳ್ಳಿ, ಫಲಾನುಭವಿ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago