ಮರಕ್ಕೆ ಕಾರು ಡಿಕ್ಕಿ ; ಚಾಲಕ ಸ್ಥಳದಲ್ಲೇ ಸಾವು

0 360

ಭದ್ರಾವತಿ : ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ (Accident) ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಬಳಗಿನಜಾವ ಭದ್ರಾವತಿಯ (Bhadravathi) ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ.

ಮೃತ ಚಾಲಕನ್ನು ಚಿಕ್ಕಮಗಳೂರಿನ ಸಖರಾಯಪಟ್ಟಣದ ಮಂಜುನಾಥ್ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ಬಿಆರ್ ಪಿ ಮಾರ್ಗವಾಗಿ ಹೋಗುತ್ತಿರುವಾಗ ಘಟನ ನಡೆದಿದೆ.

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave A Reply

Your email address will not be published.

error: Content is protected !!