ಮರಳು ಅಕ್ರಮಕ್ಕೆ ಪ್ರಭಾವಿ ವ್ಯಕ್ತಿಗಳ ಬೆಂಗಾವಲು ?ಶರಾವತಿ ಹಿನ್ನೀರು ಪ್ರದೇಶದಲ್ಲಿ ನಿರಂತರ ಮರಳು ಗಣಿಗಾರಿಕೆ, ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ; ಗಿರೀಶ್ ಆಚಾರ್

ಹೊಸನಗರ: ತಾಲೂಕಿನ ಸುತ್ತಾ, ಕಾರಣಗಿರಿ, ಬಾಳೆಕೊಪ್ಪ ಎಡಚಿಟ್ಟೆ, ಮುಳುಗುಡ್ಡೆ, ತ್ರಿಣಿವೆ, ನಂದಿಹೊಳೆ, ಈಚಲಕೊಪ್ಪ, ಮುತ್ತಲ, ಗವಟೂರು ಗ್ರಾಮಗಳ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದೆ. ಪರವಾನಗಿ ಇಲ್ಲದೇ ಟಿಪ್ಪರ್‌ಗಳ ಮೂಲಕ ಶಿವಮೊಗ್ಗ ಸೇರಿದಂತೆ ಪಟ್ಟಣ ಪ್ರದೇಶಗಳಿಗೆ ಮರಳು ಸರಬರಾಜು ಆಗುತ್ತಿದ್ದು, ಹೆಚ್ಚಿನ ದರಕ್ಕೆ ಮರಳು ಮಾರಿ ಅಕ್ರಮ ಸಂಪಾದನೆಯಲ್ಲಿ ದಂಧೆಕೋರರು ತೊಡಗಿಕೊಂಡಿದ್ದಾರೆ. ಅಕ್ರಮ ಮರಳುಗಾರಿಕೆಯ ವಿರುದ್ಧ ಹೊಸನಗರದ ಎಲ್ಲಾ ಇಲಾಖೆಗಳಿಗೆ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ದರಣಿ ನಡೆಸಿದರೂ ಏನೂ ಪ್ರಯೋಜನವಾಗಿಲ್ಲ. ಮುಂದಿನ ದಿನದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಸತ್ಯಾಗ್ರಹ ನಡೆಸುವುದರ ಜೊತೆಗೆ ಸರ್ಕಾರದ ಕಣ್ಣು ತೆರೆಸಲಾಗುವುದು ಎಂದು ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.


ಗ್ರಾಮೀಣ ಪ್ರದೇಶ ಮಾತ್ರವಲ್ಲದೇ, ಪಟ್ಟಣಕ್ಕೆ ಸಮೀಪದಲ್ಲಿಯೂ ಮರಳು ದಂಧೆ ನಡೆಯುತ್ತಿದ್ದು, ಅಧಿಕಾರಿ ವರ್ಗ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಭೂ ಮತ್ತುಗಣಿ ಇಲಾಖೆಯಿಂದ ಯಾವುದೇ ಪರವಾನಗಿ ಇಲ್ಲದಿದ್ದರೂ, ರಾಜಾರೋಷವಾಗಿ ರಾಜಧನ ವಂಚಿಸಿ ಅಕ್ರಮವಾಗಿ ಮರಳು ಸಾಗಾಟ ಮಾಡುವುದಕ್ಕೆ ಬೆಂಗಾವಲಾಗಿ ನಿಂತಿರುವುದು ಯಾರು ? ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.


ಅಕ್ರಮ ತಡೆಗೆ ರಚಿಸಿರುವ ಟಾಸ್ಕ್ ಫೋರ್ಸ್ ಭಾಗವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಾಲ್ಲೂಕು ಕಛೇರಿ, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕೈಗೊಂಡರೆ ಅಕ್ರಮ ಮರಳು ದಂಧೆ ತಡೆಯುವುದು ಕಷ್ಟವೇನಲ್ಲ ಎಂದ ಅವರು, ಆದರೆ ಇಲಾಖೆ ಅಧಿಕಾರಿಗಳು ಅಕ್ರಮದ ಬಗ್ಗೆ ಹೆಚ್ಚೇನೂ ತಲೆ ಕೆಡಿಸಿಕೊಳ್ಳದಿರುವುದರ ಹಿಂದಿನ ಕಾರಣವೇನು ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಅಕ್ರಮ ಮರಳು ಸಂಗ್ರಹ, ಸಾಗಾಣಿಕೆಯ ಜಾಲಕ್ಕೆ ಕೆಲ ಪ್ರಭಾವಿ ವ್ಯಕ್ತಿಗಳು ಕೈಜೋಡಿಸಿರುವ ಕಾರಣದಿಂದಲೇ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ. ನಾವು ಯಾವುದೇ ಮನವಿ ಪತ್ರ, ಧರಣಿ ನಡೆಸಿದರೂ ಪ್ರಯೋಜನವಾಗುತ್ತಿಲ್ಲ ಎಂದರು.


ನೀರಿನ ಆಳದಿಂದ ಮರಳು ಸಂಗ್ರಹ ಮಾಡಲು ಮಾರುತಿಪುರ, ಪುರಪ್ಪೆಮನೆ ಗ್ರಾಪಂ ವ್ಯಾಪ್ತಿ ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಕೆಲ ಕಡೆಗಳಲ್ಲಿ ಜೆಸಿಬಿ ಯಂತ್ರ ಬಳಸಿಯೂ ಮರಳು ಸಂಗ್ರಹ ಮಾಡುತ್ತಿದ್ದಾರೆ ಎಂದರು.


ನಾನು ಈಗಾಗಲೇ ಜಿಲಾಧ್ಲಿಕಾರಿ, ಲೋಕಾಯುಕ್ತ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯಿಸಿ ದೂರು ದಾಖಲಿಸಿದ್ದೇನೆ. ಆದರೆ ಮರಳು ದಂಧೆ ನಿರಾತಂಕವಾಗಿ ಮುಂದುವರೆದಿದೆ. ಸಾಲದ್ದಕ್ಕೆ ರಾಜಕೀಯ ಮೇಲಾಟವೂ ಮರಳು ದಂಧೆಯ ಜೊತೆ ತಳುಕು ಹಾಕಿಕೊಂಡಿದೆ. ವಾಸ್ತವದಲ್ಲಿ ನಡೆಯುತ್ತಿರುವುದೇ ಆಡಳಿತ ರಾಜಕೀಯ ಪಕ್ಷದಿಂದ ಬಹುತೇಕ ಲಾರಿ ಮಾಲಿಕರು ರಾಜಕೀಯ ಪಕ್ಷಗಳ ಕಾರ‍್ಯಕರ್ತರಾಗಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಎನ್ನುವಂತೆ ನದಿ ಪಾತ್ರದಲ್ಲಿ ಮರಳು ಸಂಗ್ರಹದ ಸ್ಥಳಗಳನ್ನೂ ಅವರವರೇ ಇಂದಿನ ರಾಜಕೀಯ ಪಕ್ಷದ ಕಾರ್ಯಕರ್ತರು ಹಂಚಿಕೊಂಡಿದ್ದಾರೆ ಎಂದ ಅವರು, ತಕ್ಷಣ ಅಕ್ರಮ ಮರಳಿಗೆ ಅಧಿಕಾರಿಗಳು ತಡೆ ಮಾಡಬೇಕು ಇಲ್ಲವಾದರೇ ಮುಂದಿನ ದಿನದಲ್ಲಿ ಅಧಿಕಾರಿಗಳು ನೆರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

11 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

15 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

18 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

18 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago