ಮಲೆನಾಡಿನ ಹಲವೆಡೆ ಅವಾಂತರ ಸೃಷ್ಟಿಸಿದ ಬಿರುಗಾಳಿ ಸಹಿತ ಭಾರಿ ಮಳೆ

ಶಿವಮೊಗ್ಗ/ಚಿಕ್ಕಮಗಳೂರು : ಮಲೆನಾಡಿನ ಹಲವೆಡೆ ಇಂದು ಸುರಿದ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಎನ್. ಆರ್ ಪುರ ತಾಲ್ಲೂಕಿನ ಹಲವೆಡೆ ಜೋರು ಮಳೆಯಾಗಿದ್ದು ಶೃಂಗೇರಿ ಸುತ್ತಮುತ್ತ ಗಾಳಿ ಮಳೆಯ ಅಬ್ಬರದ ಪರಿಣಾಮ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಘಟನೆ ಕುಂಚೇಬೈಲು ಗ್ರಾಮದಲ್ಲಿ ಸಂಭವಿಸಿದೆ.

ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವರಿಗೆ ಸೇರಿದ ಕಾರು ಇದಾಗಿದ್ದು ತೋಟದ ಕೆಲಸಕ್ಕೆ ಜನರನ್ನು ಕರೆದೊಯ್ಯುತ್ತಿದ್ದರು ಎನ್ನಲಾಗಿದೆ ಮಧ್ಯಾಹ್ನವಾದ ಕಾರಣ ಮನೆಗೆ ಊಟಕ್ಕೆ ಬಂದಿದ್ದರು ಈ ವೇಳೆ ಜೋರಾಗಿ ಸುರಿದ ಗಾಳಿ ಮಳೆಗೆ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದೆ ಪರಿಣಾಮ ಶೃಂಗೇರಿ-ಚಿಕ್ಕಮಗಳೂರು ರಸ್ತೆ ಕೆಲ ಕಾಲ ಬಂದ್ ಆಗಿದೆ. ಮರ ಬೀಳುವ ವೇಳೆ ಕಾರಿನಲ್ಲಿ ಯಾರು ಇಲ್ಲದಿದ್ದುದರಿಂದ ಸಂಭವನೀಯ ಅವಘಡ ತಪ್ಪಿದಂತಾಗಿದೆ.

ಹೊಸನಗರ ತಾಲೂಕಿನ ಕೋಡೂರು-ಗರ್ತಿಕೆರೆ ಮಾರ್ಗದಲ್ಲಿ ಕರಿಗೆರಸು ಬಳಿ ಬೃಹತ್ ಗಾತ್ರದ ಮರ ಬಿದ್ದಿರುವುದು.

ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ಹಲವೆಡೆ ಗುಡುಗು, ಸಿಡಿಲಾರ್ಭಟದಿಂದ ಕೂಡಿದ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು ಏಕಾಏಕಿ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಅಕೇಶಿಯ ಸೇರಿದಂತೆ ಇನ್ನಿತರ ನೂರಾರು ಮರಗಳು, ವಿದ್ಯುತ್ ಕಂಬಗಳು, ಅಡಿಕೆ ಮರಗಳು, ತೆಂಗಿನ ಮರಗಳು ಧರೆಗುರುಳಿದ ಘಟನೆ ನಡೆದಿದೆ.

ರಸ್ತೆ ಬದಿಯ ನೂರಾರು ಅಕೇಶಿಯ ಮರಗಳು ಧರೆಗುರುಳಿದ ಪರಿಣಾಮ ಕೋಣಂದೂರು-ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ಹುಂಚ, ಕೋಣಂದೂರು, ಗರ್ತಿಕೆರೆ, ಹುಂಚದಕಟ್ಟೆ, ಮಳಲಿಕೊಪ್ಪ, ಕಡಸೂರು, ನಾಗರಹಳ್ಳಿ, ಹಿಂಡ್ಲೆಮನೆ, ಹುಗುಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದೆ.

ಗಾಳಿಗೆ ಹಲವು ಮನೆ ಮೇಲ್ಚಾವಣಿ ಹೆಂಚುಗಳು, ಶೀಟುಗಳನ್ನು ಹಾರಿಹೋಗಿದ್ದು ಅಪಾರ ನಷ್ಟ ಸಂಭವಿಸಿದೆ. ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ‌.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

4 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

6 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

7 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

8 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

9 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

11 hours ago