Categories: Shivamogga

ಮಹಾನಿಯರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ; ಸಚಿವ ಮಧು ಬಂಗಾರಪ್ಪ


ಶಿವಮೊಗ್ಗ : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳು ಬೆಳೆಯುತ್ತಿರುವ ಮಕ್ಕಳಿಗೆ ಮತ್ತು ಸಮಾಜಕ್ಕೆ ಅತಿ ಅವಶ್ಯವಿದೆ. ಹಾಗಾಗಿ ಪಠ್ಯಪುಸ್ತಕಗಳಲ್ಲಿ ಅವರ ತತ್ವಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ ಮತ್ತು ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಶರಣಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಮಾಜ ಸುಧಾರಕರೂ, ತತ್ವಜ್ಞಾನಿಗಳೂ ಆದ ನಾರಾಯಣಗುರುಗಳ ಜಯಂತಿ ಆಚರಣೆ ಮಾಡುವಾಗ ಅವರ ತತ್ವಗಳ ಬಗ್ಗೆ ತಿಳಿಯದೇ ಇದ್ದರೆ ಅದರ ಪ್ರಯೋಜನ ಇರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರು ಅವರ ತತ್ವಗಳನ್ನು ತಿಳಿಯಬೇಕು ಮತ್ತು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.


ನಿವೃತ್ತ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕರು ಹಾಗೂ ಮಂಗಳೂರು ಅಖಿಲ ಭಾರತ ಬಿಲ್ಲವರ ಸಂಘದ ಕಾರ್ಯದರ್ಶಿ ಸೀತಪ್ಪ ಕೂಡೂರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ‘ಒಂದು ಜಾತಿ, ಒಂದು ಧರ್ಮ, ಎಲ್ಲಾರಿಗೂ ಒಂದೇ ದೇವರು’ ಎಂಬ ಅವರ ಮಾತಿನಂತೆಯೇ ಜಾತಿ, ಧರ್ಮದ ಭೇದವಿಲ್ಲದೇ ಪ್ರತಿಯೊಬ್ಬರಿಗೂ ದೇವರನ್ನು ಸಾಕ್ಷಾತ್ಕರಿಸಿಕೊಳ್ಳುವ ಹಕ್ಕಿದೆ ಎಂದು ಹೇಳಿದ್ದಾರೆ. 79 ದೇವಸ್ಥಾನಗಳನ್ನು ನಿರ್ಮಿಸಿದ ಅವರು ಆತ್ಮ ಮತ್ತು ಸಮಾಜದ ಉನ್ನತಿ ಆಗಬೇಕು ಎಂದಿದ್ದಾರೆ. ಅವರು ಚಿಕ್ಕಂದಿನಿಂದಲೂ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆ ಬಗ್ಗೆ ತೀವ್ರ ಅಸಮ್ಮತಿಯನ್ನು ಹೊಂದಿದ್ದಾರೆ. ನಮ್ಮಲ್ಲಿ ಭಾಂದವ್ಯವಿದ್ದರೆ ನಾವು ಸಂಘಟನೆಗೆ ಒಳಗಾಗುತ್ತೇವೆ, ನಮ್ಮಲ್ಲಿ ಸಂಘಟನೆ ಇಲ್ಲದಾಗ ನಾವು ಶೋಷಣೆಗೆ ಒಳಗಾಗುತ್ತೇವೆ ಎಂದು ಸಮಾಜದಲ್ಲಿ ಶೋಷಣೆಗೆ ಒಳಗಾದವರಿಗೆ ಗೌರವ ಸಿಗುವಂತೆ ಮಾಡಿದ್ದಾರೆ ಎಂದು ಅವರು ಹೇಳಿದರು.


ಸಹ್ಯಾದ್ರಿ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಿ.ಎಂ ಚಂದ್ರಶೇಖರ್ ಮಾತನಾಡಿ, ನುಲಿಯ ಚಂದಯ್ಯ ಕಾಯಕ ಯೋಗಿ ಶರಣರು. ಅವರ ಕಾಯಕವೇ ಹಗ್ಗವನ್ನು ಹೊಸೆಯುವುದು, ನೂಲುವುದು, ನೇಯುವುದು. ನಾವು ಯಾವುದೇ ಕೆಲಸ ಮಾಡಿದರೂ ಅದು ಕಾಯಕವೇ ಎಂಬುದು ಅವರ ಅಭಿಮತವಾಗಿತ್ತು. ಕಾಯಕದ ಮೂಲಕವೇ ಆದರ್ಶ ಬದುಕನ್ನು ರೂಪಿಸಿಕೊಳ್ಳಬೇಕು ಎನ್ನುವಂತೆ ಅವರು ಕಾಯಕದ ಮೂಲಕವೇ ಸಮಾಜವನ್ನು ಕಟ್ಟುವ ಪ್ರಯತ್ನ ಮಾಡುತ್ತಾರೆ. ಭಕ್ತಿ ಎಂಬುದು ಪರಿಶುದ್ಧ ಜೀವನ. ಧ್ಯಾನ ಮಾಡುವ ಮನಸ್ಸು, ಗುಣ ನಮ್ಮಲ್ಲಿ ಇರಬೇಕು ಎಂದು ಅವರು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಆರ್ಯ ಈಡಿಗರ ಸಂಘದ ಜಿಲ್ಲಾ ಅಧ್ಯಕ್ಷ ಡಾ.ಆರ್. ಶ್ರೀಧರ್ ಹುಲ್ತಿಕೊಪ್ಪ, ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪಕೀರಪ್ಪ ಭಜಂತ್ರಿ, ಜಿಲ್ಲಾ ಕುಳುವ ಮಹಾಸಭಾದ ಅಧ್ಯಕ್ಷ ಅನಿಲ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago