ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ : ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ (Deer) ಬೇಟೆಗಾರನನ್ನು (Hunter) ಅರಣ್ಯಾಧಿಕಾರಿಗಳು (Forest Department) ಬಂಧಿಸಿದ ಘಟನೆ ನಡೆದಿದೆ.

ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ.

ಇನ್ನೂ 03 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು ಈ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರಡಿ ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಡಿಎಫ್ಒ ಶಿವಶಂಕರ ಇ., ಎಸಿಎಫ್ ಪ್ರಕಾಶ್ ಹೆಚ್.ಎಸ್. ಇವರುಗಳ ಮಾರ್ಗದರ್ಶನದಲ್ಲಿ ಮಂಡಗದ್ದೆ ಆರ್.ಎಫ್.ಓ ಆದರ್ಶ ಎಂ.ಪಿ. ರವರ ನೇತೃತ್ವದಲ್ಲಿ ನಡೆದಿದ್ದು, ಉಪ ವಲಯ ಅರಣ್ಯಾಧಿಕಾರಿ ಸುಹಾಸ ಬಿ.ಆರ್, ಗಸ್ತು ಅರಣ್ಯ ಪಾಲಕರಾದ ದುರುಗಪ್ಪ, ಮಹಾದೇವ ಕಣ್ಣೂರ ಹಾಗೂ ವಾಹನ ಚಾಲಕ ನವೀನ್. ಎಸ್. ಇವರುಗಳು ಪಾಲ್ಗೊಂಡಿದ್ದರು.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಕೃತ್ಯಕ್ಕೆ 03 ವರ್ಷಗಳ ಸೆರೆವಾಸ ಮತ್ತು 01 ಲಕ್ಷ ರೂ.ವರೆಗೆ ದಂಡದ ಶಿಕ್ಷೆ ಇರುತ್ತದೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

7 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

10 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

11 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

16 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

17 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago