Categories: Shivamogga

ಮಾ.09 ರಿಂದ ದ್ವಿತೀಯ ಪಿಯು ಪರೀಕ್ಷೆ ; ಸಕಲ ಸಿದ್ದತೆ

ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ


ಶಿವಮೊಗ್ಗ : ಜಿಲ್ಲೆಯಲ್ಲಿ ಮಾರ್ಚ್ 09 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ತಿಳಿಸಿದರು.


ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.


ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 16711 ರೆಗ್ಯುಲರ್ ವಿದ್ಯಾರ್ಥಿಗಳು, 1451 ರಿಪೀಟರ್ ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿವಮೊಗ್ಗ 13, ಭದ್ರಾವತಿ 06, ತೀರ್ಥಹಳ್ಳಿ 03, ಹೊಸನಗರ 03, ಸಾಗರ 05, ಶಿಕಾರಿಪುರ 04 ಮತ್ತು ಸೊರಬ 02 ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.


ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.


ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು.ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.


ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.

ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ
ಶಿವಮೊಗ್ಗ : ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಮಾ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಾ.12 ರ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6045 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.


ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯರ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.


ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು. ಹಾಗೂ ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.


ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

4 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

14 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

20 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago