ಮಾ.25 ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ; ಚಂದ್ರಮೌಳಿಗೌಡ

0 291

ಹೊಸನಗರ: ಮಾ. 25ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಆರ್ಯ ಈಡಿಗರ ಸಬಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಸಾಗರ ಹೊಸನಗರ ಕ್ಷೇತ್ರ ಶಾಸಕ ಬೇಳೂರು ಗೋಪಾಲಕೃಷ್ಣ, ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಗೌಡ, ಮಾಜಿ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಇನ್ನೂ ಮುಂತಾದವರು ಆಗಮಿಸಲಿದ್ದು ಈ ಕಾರ್ಯಕ್ರಮಕ್ಕೆ ಹೊಸನಗರ ತಾಲ್ಲೂಕಿನ ಎಲ್ಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೋಬಳಿ ಮಟ್ಟದ ಅಧ್ಯಕ್ಷ ಸದಸ್ಯರುಗಳು ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ಸದಸ್ಯರುಗಳು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡಿದ್ದಾರೆ.

Leave A Reply

Your email address will not be published.

error: Content is protected !!