Categories: Shivamogga

ಮಾ. 27 ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ


ಶಿವಮೊಗ್ಗ : 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:27-03-2023 ರಿಂದ 01-04-2023ರ ವರೆಗೆ ಮೌಲ್ಯಾಂಕನ ನಡೆಸಲಾಗುವುದು.


5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿರುತ್ತದೆ.


ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಲಾಗಿದೆ.


ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಉಪನಿರ್ದೇಶಕರು (ಅಭಿವೃದ್ದಿ) ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

9 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

11 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

12 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

17 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

18 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago