Categories: Shivamogga

‘ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು ಹಿಂದೂಗಳಲ್ಲಿಯು ಕೆಲ ತಲೆಹರಟೆಗಳಿದ್ದಾರೆ’ ; ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಡಿಯೋ ವೈರಲ್

ಶಿವಮೊಗ್ಗ: ‘ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯು ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ. ಮುಸ್ಲಿಂರಲ್ಲಿಯೂ ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸ ಮಾಡಿದಾಗ ಗಲಾಟೆ ಶುರುವಾಗುತ್ತದೆ’ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್​ಬುಕ್​ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, ಆನಂತರ ಸೋಶಿಯಲ್ ಮೀಡಿಯಾಗಳಲ್ಲಿ ಪರ-ವಿರೋಧ ಚರ್ಚೆಗಳೊಂದಿಗೆ ಹಂಚಿಕೆಯಾಗುತ್ತಿದೆ.

ಏನಿದೆ ವಿಡಿಯೋದಲ್ಲಿ?

ಮೂರು ದಿನಗಳ ಹಿಂದಿನ ವಿಡಿಯೋ ಇದಾಗಿದ್ದು, ಅಲ್ಪಸಂಖ್ಯಾತ ಮುಖಂಡರು ಕೆ.ಎಸ್.ಈಶ್ವರಪ್ಪನವರೊಂದಿಗೆ ಸೇರಿದ್ದ ಸಭೆಯಲ್ಲಿ ಮಾಜಿ ಸಚಿವರು ಮಾತನಾಡಿದ್ದಾರೆ. ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರ ಮಾತು ಇಲ್ಲಿದೆ.

‘ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸ ಮಾಡಿದಾಗ ಗಲಾಟೆ ಶುರುವಾಗುತ್ತದೆ. ಇಲ್ಲಾಂದ್ರೆ ತಣ್ಣಗೆ ಇರುತ್ತದೆ. ನಾನು ತಪ್ಪು ಮಾಡಿದ್ರೆ ಇಲ್ಲಿಯೇ ಸಭೆಯಲ್ಲಿ ಹೇಳಿ, ಸಮಾಜದಲ್ಲಿ ಅಣ್ಣ ತಮ್ಮಂದಿರಂತೆ ಇರುತ್ತೇವೆ. ನಾನ್ಯಾವ ವಿಚಾರಕ್ಕೆ ಗಲಾಟೆ ಮಾಡುತ್ತೇನೆ ಎಂದು ಉದಾಹರಣೆಗೆ ಕೊಡುತ್ತೇನೆ. ಶಿವಪ್ಪನಾಯಕ ಸರ್ಕಲ್​ನಲ್ಲಿ ಎಸ್ಡಿಡಿಪಿಐನವರು ಒಂದು ಸಮ್ಮೇಳನ ಮಾಡಿದ್ದರು. ಆ ಸಮ್ಮೇಳನದಲ್ಲಿ ಯಾವನೋ ಒಬ್ಬ ಭಾರತ ವಿರೋಧಿ ಘೋಷಣೆ ಕೂಗುತ್ತಾನೆ. ಅದನ್ನು ಕೇಳಿ ಸುಮ್ಮನಿರುತ್ತಾರಾ ಯಾರಾದ್ರೂ?’ ಎಂದು ಮರುಪ್ರಶ್ನೆ ಮಾಡಿದರು.

‘ನಾನು ಬಾಯಿ ಬಿಟ್ಟು ಹೇಳುತ್ತೇನೆ ನೀವು ಸುಮ್ಮನಿರ್ತೀರಿ. ಆದರೆ ನಾನು ಸುಮ್ಮನಿರಲಿಲ್ಲ. ಅದೇ ದಿನ ವಾಪಸ್ ಹೋಗುವಾಗ ಗಾಜನೂರು ಹತ್ತಿರ ತಲವಾರ್ ಬೀಸಿದರು. ಆದರೆ ಅವರು ಶಿವಮೊಗ್ಗದವರಲ್ಲ. ಇದಕ್ಕೆಲ್ಲಾ ಶಿವಮೊಗ್ಗ ಮುಸಲ್ಮಾನರು ಕಾರಣನಾ?’

‘ಶಿವಮೊಗ್ಗದ ಹರ್ಷನನ್ನು ರಾತ್ರಿ ಬಂದು ಯಾರೋ ಹೊಡೆದೋದ್ರು. ಸುಮ್ಮಸಮ್ಮನೆ ನಮ್ಮ ನಿಮ್ಮ ಮಕ್ಕಳನ್ನ ಹೊಡೆದ್ರೆ ಸುಮ್ಮನಿರೋದಕ್ಕಾಗುತ್ತಾ? ಖಂಡಿಸಬೇಕಾ ಬೇಡವಾ? ನಾನಂತು ಖಂಡಿಸ್ತೇನೆ. ಇಂಥ ಕೆಲಸವನ್ನು ಬಿಜೆಪಿಯಲ್ಲಿ ಬಹಳ ಜನ ಮಾಡಲ್ಲ. ಆ ಪ್ರಶ್ನೆ ಬೇರೆ. ಆದರೆ ನನಗೆ ತಡೆದುಕೊಳ್ಳಲಾಗಲ್ಲ. ಕೆಟ್ಟದನ್ನು ಎಂದೂ ಕೂಡ ನಾನು ಬಿಡೋದಿಲ್ಲ’ ಎಂದು ಖಡಕ್ ಆಗಿ ಮಾತನಾಡಿದ್ದಾರೆ.

‘ಎಲ್ಲಾ ಮುಸಲ್ಮಾನರ ಬಗ್ಗೆ ನಾವು ಹೇಳೋದಿಲ್ಲ, ಗೂಂಡಾಗಿರಿ ಮಾಡಿ ತೊಂದರೆ ಕೊಡುವವರ ಬಗ್ಗೆ ನಾನು ಖಂಡಿಸ್ತೀನಿ’ ಎಂದಿದ್ದಾರೆ.

ಸದ್ಯ ಈ ವಿಡಿಯೋದ ಸ್ಕ್ರೀನ್ ರೆಕಾರ್ಡ್​ಗಳು ವಾಟ್ಸ್ಯಾಪ್​ ಗ್ರೂಪ್​ಗಳಲ್ಲಿ ಹರಿದಾಡುತ್ತಿದ್ದು, ಮಾಜಿ ಸಚಿವರ ಹೇಳಿಕೆಯನ್ನು ತಮ್ಮದೇ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಅಲ್ಲದೆ ಈ ಸಂಬಂಧ ಚರ್ಚೆಗಳು ಸಹ ನಡೆಯುತ್ತಿವೆ.

Malnad Times

Recent Posts

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

42 mins ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

12 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

13 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

15 hours ago