ಮುಸ್ಲಿಂ ಗೂಂಡಾಗಳು ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿದರೆ ತಪ್ಪು ; ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಹಿಂದುತ್ವ ಮರೆಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಗೂಂಡಾಗಳು ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿದರೆ ತಪ್ಪು. ಹರ್ಷನ ಹತ್ಯೆ ಘಟನೆಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು ಕೂಡ ಇದನ್ನೇ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ವಿಚಾರದಲ್ಲಿ ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಲಿ. ನಮಗೆ ಗೊತ್ತಾಗದೆ ಯಾವುದಾದರೂ ತಪ್ಪಾಗಿರಬಹುದು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ 28 ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಘೋಷಿಸಲಿ ಎಂದು ಹೇಳಿದರು.

ಸಂಸತ್ ಚುನಾವಣೆ ಹತ್ತಿರ ಬರುತ್ತಿದೆ. ನಳೀನ್ ಕುಮಾರ್ ಕಟೀಲರನ್ನೇ ಮುಂದುವರೆಸುವುದಾದರೆ ಮುಂದುವರಿಸಲಿ. ಯಾವುದಾದರೂ ತೀರ್ಮಾನವನ್ನು ಆದಷ್ಟು ಬೇಗನೇ ತೆಗೆದುಕೊಳ್ಳಲಿ. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

ಉತ್ತರಾದಿ ಮಠ ಶೋಭನ ನಾಮ ಸಂವತ್ಸರದ  ಚಾತುರ್ಮಾಸ್ಯದ ಸೀಮೋಲ್ಲಂಘನದ ದಿನ

ಶಿವಮೊಗ್ಗ: ಶ್ರೀ ಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರಿಮದುತ್ತರಾದಿ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ 1008 ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರಿಂದ 28ನೇ ಚಾತುರ್ಮಾಸ್ಯ ಮಹೋತ್ಸವದ ಕೊನೆಯ ದಿನವಾದ ಇಂದು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕುಟುಂಬ ಸಮೇತ ಆಗಮಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಶ್ರೀನಾಥ್ ನಗರಗದ್ದೆ ಮತ್ತು ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಸುಧೀಂದ್ರ ಕಟ್ಟೆ ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago