Categories: Shivamogga

‘ಮೇರಿ ಮಾಟಿ ಮೇರಾ ದೇಶ್’ ರಾಷ್ಟ್ರಮಟ್ಟದ ಅಮೃತ ಕಳಶ ಯಾತ್ರೆಗೆ ಬೀಳ್ಕೊಡುಗೆ


ಶಿವಮೊಗ್ಗ: ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ಪ್ರತಿಷ್ಠಿತ ಅಭಿಯಾನವಾದ ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಅದ್ದೂರಿಯಾಗಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು. ಜಿಲ್ಲೆಯ 7 ತಾಲ್ಲೂಕಿನಿಂದ ಸಂಗ್ರಹಿಸಿರುವ ಮಣ್ಣಿನ ಅಮೃತ ಕಳಶಕ್ಕೆ ನೆಹರು ಯುವ ಕೇಂದ್ರದಲ್ಲಿ ಪೂಜೆ ಸಲ್ಲಿಸಿ‌ ಅ. 26 ರಂದು ದೆಹಲಿಗೆ ಕೊಂಡೊಯ್ಯುವ ಯುವ ಕಾರ್ಯಕರ್ತರ ತಂಡಕ್ಕೆ ಶುಭ ಹಾರೈಸಿ ರಾಷ್ಟ್ರ ಮಟ್ಟದ ಅಮೃತ ಕಳಶ ಯಾತ್ರೆಗೆ ಬೀಳ್ಕೊಡಲಾಯಿತು.


ಶಿವಮೊಗ್ಗ ಜಿಲ್ಲೆಯಿಂದ ಹೊರಟ ತಂಡವು ಬೆಂಗಳೂರಿಗೆ ತೆರಳಿ ಅ.27 ರಂದು ನಡೆಯುವ ರಾಜ್ಯ ಮಟ್ಟದ ಅಮೃತಕಳಶ ಯಾತ್ರೆಯಲ್ಲಿ ಪಾಲ್ಗೊಂಡು,ನಂತರ ಮಧ್ಯಾಹ್ನ ವಿಶೇಷ ರೈಲಿನ ಮೂಲಕ ನವದೆಹಲಿಗೆ ತೆರಳಲಿದ್ದಾರೆ.
ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ರವರು ಬೀಳ್ಕೊಡುಗೆಯ ಸಂಧರ್ಭದಲ್ಲಿ ಕಾರ್ಯಕ್ರಮ ಕುರಿತಾಗಿ ಮಾತನಾಡಿ, ಜಿಲ್ಲೆಯ ಯುವಕರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ,ಈ ಕಾರ್ಯಕ್ರಮದಲ್ಲಿ ಯುವಕ/ಯುವತಿಯರು ಭಾಗವಹಿಸುತ್ತಿರುವುದು ಜಿಲ್ಲೆಯ ಯುವಜನರಿಗೆ ಆದರ್ಶವಾಗಿದೆ. ನಮ್ಮ ಜಿಲ್ಲೆಯಿಂದ ಒಟ್ಟು 34 ಯುವಕ/ಯುವತಿಯರು ತೆರಳುತ್ತಿದ್ದು ಅಕ್ಟೋಬರ್ 30,31 ರಂದು ದೆಹಲಿಯ ಕರ್ತವ್ಯ ಪಥ್‍ನಲ್ಲಿ ನಡೆಯಲಿರುವ ಬೃಹತ್ ಅಮೃತ ಕಳಶದ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಈ ಅಮೃತ ಕಳಶದ ಮಣ್ಣಿನಲ್ಲಿ ಅಮೃತ ವಾಟಿಕಾ(ಉದ್ಯಾನವನ) ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕವನ್ನು ಮಾಡಲಿದ್ದಾರೆ ಎಂದು ತಿಳಿಸಿದರು.


ಈ ವೇಳೆ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ, ಭದ್ರಾವತಿ ಪಟ್ಟಣ ಪಂಚಾಯತ್‍ನ ಸತೀಶ್, ನೆ.ಯು.ಕೇಂದ್ರದ ಲೆಕ್ಕಾಧಿಕಾರಿ ರಮೇಶ್, ರಾಷ್ಟ್ರೀಯ ಯುವ ಕಾರ್ಯಕರ್ತರು, ಇತರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago