Categories: Shivamogga

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹಿಂದೆಂದೂ ಕಾಣದ ರೀತಿಯಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ ವರ್ಗದ ಜನ ಅಭಿನಂದಿಸುತ್ತಿದ್ದಾರೆ. ಮತ ಕೇಳಲು ಮನೆಗೆ ಹೋದರಿಗೆ ಮನೆ ಒಳಗೆ ಕರೆದು ಚಹಾ, ನೀರು, ನೀಡುತ್ತಿದ್ದಾರೆ. ಇವರ ಪ್ರೀತಿಗೆ ಹೃದಯ ತುಂಬಿ ಬರುತ್ತಿದೆ ಎಂದರು.

ಈಗಾಗಲೇ ಗ್ಯಾರಂಟಿ ಕಾರ್ಡ್‍ಗಳ ವಿತರಣೆ ಕಾರ್ಯ ಮುಗಿದಿದೆ. 3ನೇ ಹಂತದ ಪ್ರಚಾರಕ್ಕೆ ಕಾಲಿಟ್ಟಿದ್ದೇವೆ. ಬಿಜೆಪಿ ಪ್ರಚಾರಕ್ಕೆ ಹೋಲಿಸಿದರೆ ನಮ್ಮ ಪ್ರಚಾರವೇ ಜಾಸ್ತಿ ಇದೆ. ಮೇ 2ರಂದು ಮಧ್ಯಾಹ್ನ 12 ರಿಂದ 1:30ರವರೆಗೆ ರಾಹುಲ್ ಗಾಂಧಿಯವರು ಸಮಯ ನೀಡಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಲಿದ್ದಾರೆ ಎಂದರು.

ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ ಮತ್ತು ಶಿವಮೊಗ್ಗ ನಗರ ನಾಲ್ಕು ತಾಲ್ಲೂಕುಗಳ ಮತದಾರರು ಆಗಮಿಸಲಿದ್ದಾರೆ. ಅಲ್ಲದೆ ಫಿಲಂ ಛೇಂಬರ್‍ನವರು ಕೂಡ ಇದೇ ಮೊದಲ ಬಾರಿಗೆ ಗೀತಾ ಶಿವರಾಜ್‍ಕುಮಾರ್‍ ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ 8 ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್‍ಶೋ ಮೂಲಕ ಗೀತಕ್ಕನ ಪರ ವ್ಯಾಪಕ ಪ್ರಚಾರ ಮಾಡಲಿದ್ದಾರೆ. ನಾವು ಅವರಿಗೆ ಒತ್ತಾಯಿಸಿಲ್ಲ. ಅವರೇ ಸ್ವಯಂ ಪ್ರೇರಿತರಾಗಿ ಬರುತ್ತಿದ್ದು, ಇನ್ನೂ ಅನೇಕ ಚಿತ್ರರಂಗದ ಪ್ರಮುಖರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನಟ ದುನಿಯಾ ವಿಜಿ, ಡಾಲಿ ಧಜಂಜಯ್, ಸತ್ಯ, ಚಿಕ್ಕಣ್ಣ, ವಿಜಯರಾಘವೇಂದ್ರ, ನೆನಪಿರಲಿ ಪ್ರೇಮ್, ನಿಸ್ವಿಕಾನಾಯ್ಡು, ಚಂದನಶೆಟ್ಟಿ, ಅನುಶ್ರೀ, ಅಕುಲ್‍ಬಾಲಾಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.

ಧರ್ಮದ ಹೆಸರಿನಲ್ಲಿ ಜನರನ್ನು ಉದ್ವೇಗಕ್ಕೆ ಒಳಗಾಗಿಸಿ ಹೊಟ್ಟೆಗೆ ಕನೆಕ್ಷನ್ ಇಲ್ಲದಾಗೆ ಬಿಜೆಪಿಯವರು ಮಾಡಿದ್ದರು. ಆದರೆ ಮತದಾರ ಈಗ ಧರ್ಮಕ್ಕಿಂತ ಹೊಟ್ಟೆಪಾಡೆ ಮೇಲೆ ಎಂದು ಅರಿತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಅತ್ಯಂತ ದೊಡ್ಡ ಅಂತರದಲ್ಲಿ ಗೀತಾ ಶಿವರಾಜ್‍ಕುಮಾರ್ ಗೆಲ್ಲುತ್ತಾರೆ. ಮೋದಿ ಸರ್ಕಾರದ ಅಭಿವೃದ್ಧಿಯನ್ನು ಮತ್ತು ಸುಳ್ಳನ್ನು 10 ವರ್ಷದಲ್ಲಿ ಜನ ನೋಡಿದ್ದಾರೆ. ಅಣ್ಣಾಮಲೈ ವಿಳಾಸ ಇಲ್ಲದ ವ್ಯಕ್ತಿ, ತಮಿಳುನಾಡಿಗೆ ಯಾಕೆ ಹೋದರು. ಅವರ ಪ್ರಚಾರ ಯಾವುದೇ ಪರಿಣಾಮ ಬೀರಲ್ಲ ಎಂದರು.

ಸುದ್ಧಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ.ಮಂಜುನಾಥ್, ಪ್ರಮುಖರಾದ ಸುವರ್ಣ ನಾಗರಾಜ್, ಚಿನ್ನಪ್ಪ, ಶಮಂತ್, ಜಿತೇಂದ್ರ ಸೇರಿದಂತೆ ಹಲವರಿದ್ದರು.

Malnad Times

Recent Posts

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 hour ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

9 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

9 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

11 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

21 hours ago