Categories: Shivamogga

ಮೇ 13 ಮತ್ತು 14 ರಂದು ನಿಷೇಧಾಜ್ಞೆ ಜಾರಿ


ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳ ಲೋಕಸಭೆ ಉಪಚುನಾವಣೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಮೇ 13 ರ ಬೆಳಗ್ಗೆ 6 ರಿಂದ ಮೇ 14 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.


ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.


ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ನಿಷೇಧಾಜ್ಞೆಯು ಸುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸಕ್ಕದ್ದಲ್ಲ.

Malnad Times

Recent Posts

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

6 mins ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

1 hour ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

3 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

3 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಈವರೆಗಿನ ಶೇಕಡಾವಾರು ಮತದಾನದ ವಿವರ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…

5 hours ago