Categories: Shivamogga

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ಮರಳು ಮಾಡಿದೆ ; ಹೆಚ್.ಎಸ್. ಸುಂದರೇಶ್

ಶಿವಮೊಗ್ಗ : ಅನೇಕ ಸುಳ್ಳುಗಳನ್ನು ಹೇಳಿ ಮೋದಿ ನೇತೃತ್ವದ ಬಿಜೆಪಿ (BJP) ಸರ್ಕಾರ ಜನರನ್ನು ಮರಳು ಮಾಡಿದೆ. ಒಂದು ಭರವಸೆಯನ್ನು ಈಡೇರಿಸಿಲ್ಲ. ಕಾಂಗ್ರೆಸ್ (Congress) ಕಾರ್ಯಕರ್ತರು ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬರುವ ರೀತಿಯಲ್ಲಿ ಪ್ರತಿಜ್ಞೆ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 139ನೇ ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದ ಧ್ಯೇಯ, ಪಕ್ಷ ಬೆಳೆದು ಬಂದ ರೀತಿ ಮತ್ತು ಕಾರ್ಯಕರ್ತರು ಮಾಡಬೇಕಾದ ಕಾರ್ಯಗಳ ಬಗ್ಗೆ ಅರಿವು ಮೂಡಿಸಿ ಮಾತನಾಡಿದರು.

ದೇಶದಲ್ಲಿ ಬಿಜೆಪಿ ಅರಾಜಕತೆ ಸೃಷ್ಟಿಸುತ್ತ ದಿನಕ್ಕೊಂದು ಹೊಸ ವಿಷಯಗಳನ್ನು ತಂದು ಜನರ ಗಮನವನ್ನು ಬೆರೆಡೆಗೆ ಸೆಳೆದು, ಲೂಟಿ ಹೊಡೆಯುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಿದ್ದಾರೆ. 70 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿದ ಸಾಧನೆಯನ್ನು ತಮ್ಮದೆಂದು ಹೇಳಿಕೊಳ್ಳುತ್ತ ಕೇವಲ ಹತ್ತು ವರ್ಷದಲ್ಲಿ 140 ಲಕ್ಷ ಕೋಟಿ ಸಾಲವನ್ನು ಮಾಡಿದ್ದೇ ಅವರ ಸಾಧನೆ. ದೇಶ ದಿವಾಳಿಯತ್ತ ಸಾಗಿದೆ. ಆರ್ಥಿಕ ಸ್ಥಿತಿ ಹದಗೆಟ್ಟಿದೆ. ನಿರುದ್ಯೋಗ ತಾಂಡವವಾಡುತ್ತಿದೆ. ಯಾರಿಗೂ ಗೊತ್ತಿಲ್ಲದ ಆಗೆ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿ, ಲೂಟಿ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ಜಿಎಸ್.ಟಿ. ಹಣ ಸಂಗ್ರಹ ಮಾಡಿದ್ದು, ಎಲ್ಲಿಗೆ ಹೋಯಿತು. ಕರೋನ ಸಂದರ್ಭದಲ್ಲಿ ಜನರ ಪ್ರಾಣ ಉಳಿಸುವ ಔಷಧಿಗಳಲ್ಲಿ 40 ಸಾವಿರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ವತಹ ಬಿಜೆಪಿ ನಾಯಕ ಯತ್ನಾಕ್ ಆರೋಪಿಸಿದ್ದಾರೆ. ಅದು ನಿಜ ಹೌದು, ಸಾಫ್ಟ್‌ವೇರ್ ಕಂಪನಿಗಳನ್ನು ತಂದಿದ್ದು, ದೇಶದಲ್ಲಿ ಮೊಬೈಲ್ ತಂತ್ರಜ್ಞಾನ ತಂದಿದ್ದು ಬಿಜೆಪಿಯವರಲ್ಲ ರಾಜೀವ್‌ಗಾಂಧಿಯವರು ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ದೇಶದ ಎಲ್ಲಾ ಪ್ರಮುಖ ಮೀಡಿಯಾಗಳನ್ನು ಬಿಜೆಪಿ ಖರೀದಿಸಿದೆ, ಅವರ ಹುಳುಕುಗಳನ್ನು ಮುಚ್ಚಿಹಾಕಲು ವ್ಯವಸ್ಥಿತ ಯೋಜನೆ ಮಾಡಿದ್ದಾರೆ. ನೈಜ್ಯತೆಯನ್ನು ಅರಿತು ಬಿಜೆಪಿಯನ್ನು ಸೋಲಿಸಲು ಜನ ಸಾಮಾನ್ಯರಿಗೆ ಈ ವಿಚಾರಗಳನ್ನು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ಎಂ.ಶ್ರೀಕಾಂತ್, ಎನ್.ರಮೇಶ್, ಕಲಗೋಡು ರತ್ನಾಕರ್, ಹೆಚ್.ಸಿ.ಯೋಗೀಶ್, ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ಎಂ. ಮಂಜುನಾಥ್, ಎಸ್.ಟಿ. ಚಂದ್ರಶೇಖರ್, ಚಂದ್ರಭೂಪಾಲ್, ಎನ್.ಡಿ. ಪ್ರವೀಣ್ ಕುಮಾರ್, ಖಲೀಂ ಪಾಶಾ ಮತ್ತಿತರರು ಇದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago