ಯೋಗದಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಕಾಣಬಹುದು‌ ; ಎಸ್.ಎನ್. ಚನ್ನಬಸಪ್ಪ

0 44


ಶಿವಮೊಗ್ಗ: ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯವಾಗಿರಿಸಬಹುದು. ಹಾಗೇಯೇ ನಮ್ಮ ದೇಶದ ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚನ್ನಬಸಪ್ಪರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.


ಅವರು ಇಂದು ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಶಿವಮೊಗ್ಗ ಇವರು ಕುವೆಂಪು ವಿಶ್ವವಿದ್ಯಾಲಯ, ಎನ್.ಎಸ್.ಎಸ್. ಹಾಗೂ ಸಹ್ಯಾದ್ರಿ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಕೇಂದ್ರ ಸರ್ಕಾರದ 9 ವರ್ಷಗಳ ಸೇವೆಯ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪ್ರಧಾನಮಂತ್ರಿಯವರು ಯೋಗವನ್ನು ವಿಶ್ವಕ್ಕೆ ಪರಿಚಯಿಸಿ ಎಲ್ಲಾ ದೇಶಗಳು ನಮ್ಮ ದೇಶವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜೇಶ್ವರಿ, ಕುವೆಂಪು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ನಾಗರಾಜು ಪರಿಸರ ಹಾಗೂ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವೀಣಾ ಭಾಗವಹಿಸಿದ್ದರು. ಕಾಲೇಜಿನ ಸುಮಾರು 400 ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು ಹಾಗೂ ಸಂಗೀತ ಮತ್ತು ನಾಟಕ ವಿಭಾಗದ ಕಲಾವಿದರು ನಾಟಕ ಪ್ರದರ್ಶನದ ಮೂಲಕ ಯೋಗ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪರಿಚಯಿಸಿದರು.


ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಸಹಾಯಕ ಸಿ.ವಿ.ಲಕ್ಷ್ಮೀಕಾಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಕೆಂಚನಾಲ ಕಾರ್ಯಕ್ರಮದ ನಿರೂಪಣೆ ಮಾಡಿದರು.

Leave A Reply

Your email address will not be published.

error: Content is protected !!