Categories: Shivamogga

ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ತೆರೆಯಲಾಗುವುದು ; ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ 3ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಸಮಿತಿ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.


ಅವರು ಇಂದು ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಸಚಿವರಾದ ಮೇಲೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಪರಿಹಾರ ನೀಡಬಹುದಾದ ಸಮಸ್ಯೆಗಳು ಇಲ್ಲಿವೆ. ಹಲವು ನಿರ್ಣಯಗಳನ್ನು ತೆಗೆದುಕೊಂಡಿದ್ದೇನೆ. ಮಕ್ಕಳಿಗೆ ತೊಂದರೆಯಾಗಬಾರದು ಎಂಬ ಹಿನ್ನೆಲೆಯಲ್ಲಿ 43 ಸಾವಿರ ಅತಿಥಿ ಶಿಕ್ಷಕರು  ಹಾಗೂ 13 ಸಾವಿರ ಖಾಯಂ ಶಿಕ್ಷಕರ ನೇಮಕವಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ಇವೆಲ್ಲವೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕು ಎಂಬ ಉದ್ದೇಶ ಇದೆ. ಮಕ್ಕಳಿಗೆ ಪಾಠ ಹೇಳುವುದು ಪುಣ್ಯದ ಕೆಲಸ ಎಂದು ಶಿಕ್ಷಕರು ತಿಳಿಯಬೇಕು ಎಂದರು.


ರಾಜ್ಯದಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು. ಈ ವರ್ಷ ಸುಮಾರು 300 ಶಾಲೆಗಳನ್ನು ತೆರೆಯಲಾಗುವುದು. ಈ ಶಾಲೆಗಳು ಎಲ್‌ಕೆಜಿಯಿಂದ ಹಿಡಿದು 12ನೇ ತರಗತಿವರೆಗೆ ಇರುತ್ತದೆ ಮತ್ತು ಪ್ರಥಮ ಹಾಗೂ ದ್ವಿತೀಯ ಭಾಷೆಯಾಗಿ ಕನ್ನಡ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.ಕನ್ನಡ ಮಾಧ್ಯಮ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.


ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುರು ಹಂತದಲ್ಲಿ ಮಾಡುವುದನ್ನು ಸಮರ್ಥಿಸಿಕೊಂಡ ಸಚಿವರು ಇದರಿಂದ ಮಕ್ಕಳಿಗೆ ಒಂದು ಅವಕಾಶವನ್ನು ನೀಡಿದಂತಾಗುತ್ತದೆ. ಪ್ರಸಕ್ತ ವರ್ಷದಲ್ಲಿ ಈ ಅವಕಾಶ ಬಳಸಿಕೊಂಡ ಸುಮಾರು 42 ಸಾವಿರ ಮಕ್ಕಳು ಶೈಕ್ಷಣಿಕ ವರ್ಷವನ್ನು ನಷ್ಟ ಮಾಡಿಕೊಳ್ಳದೆ ವ್ಯಾಸಂಗದಲ್ಲಿದ್ದಾರೆ ಎಂದರು.


ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್. ರಮೇಶ್, ಸರ್ಕಾರಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಒತ್ತು ನೀಡುತ್ತಿದೆ. ಹಲವು ಬದಲಾವಣೆಗಳನ್ನು ತರುತ್ತಿದೆ. ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಅನುದಾನ ಕೂಡ ಹೆಚ್ಚಳ ಮಾಡಲಾಗಿದೆ. ಪ್ರತಿಯೊಂದು ಶಾಲೆಗಳೂ ಶೈಕ್ಷಣಿಕ ಸುಧಾರಣೆಗಾಗಿ ಕಾರ್ಯಕ್ರಮಗಳನ್ನು ನಿಯೋಜಿಸಬೇಕಾಗಿದೆ. ನಮ್ಮ ಶಾಲೆ ಕೂಡ ಶಿಕ್ಷಣ ಕ್ಷೇತ್ರಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.


ಕಾರ್ಯಕ್ರಮದಲ್ಲಿ ಡಿಡಿಪಿಐ ಪರಮೇಶ್ವರಪ್ಪ, ಶಿಕ್ಷಣ ತಜ್ಞ ನಿವೃತ್ತ ಪ್ರೊಫೆಸರ್ ಚಂದ್ರಕಾಂತ್, ಡಯೆಟ್‌ನ ಡಾ. ಹರಿಪ್ರಸಾದ್, ಉಪನಿರ್ದೇಶಕ ಬಸವರಾಜಪ್ಪ, ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್, ಕೃಷ್ಣಪ್ಪ ಸೇರಿದಂತ ಹಲವರಿದ್ದರು. ಕಾರ್ಯಾಗಾರದಲ್ಲಿ ಸುಮಾರು 600ಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

12 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

16 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

18 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

19 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago