ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಶಿವಮೊಗ್ಗ/ಚಿಕ್ಕಮಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇಂದು ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕರಾವಳಿಯ ಎಲ್ಲ ಜಿಲ್ಲೆಗಳು, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಏಪ್ರಿಲ್ 11ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Malnad Times

Recent Posts

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

35 mins ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

3 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

5 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

8 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

12 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

1 day ago