ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಪದವಿ/ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ (Mahatma Gandhiji) 154ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಶಿವಮೊಗ್ಗದ (Shivamogga) ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಕು|| ಧನುಶ್ರೀ ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಗಾಂಧೀಜಿಯವರ ಸಾಮಾಜಿಕ, ಆರ್ಥಿಕ, ಸ್ವರಾಜ್ ಚಿಂತನೆಗಳು, ಸತ್ಯ, ಅಹಿಂಸೆ ತತ್ವಗಳು, ಜಾತ್ಯಾತೀತ ನಿಲುವುಗಳು, ಸೌಹಾರ್ದತೆ, ಸ್ವಾವಲಂಬನೆಯ ಬದುಕು, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು.
ಧನುಶ್ರೀಯವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…