Categories: Shivamogga

ರಾಷ್ಟ್ರೀಯ ಲೋಕ್ ಅದಾಲತ್ |ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಬೇಕು ; ನ್ಯಾ.ಆರ್.ದೇವದಾಸ್



ಶಿವಮೊಗ್ಗ: ರಾಜೀ ಸಂಧಾನದಿಂದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ಹೇಳಿದರು.


ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದೊಂದಿಗೆ ಇಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲಯ್‍ನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಎಲ್ಲಿಯವರೆಗೆ ಮನುಷ್ಯ ಇರುತ್ತಾನೋ ಅಲ್ಲಿಯವರೆಗೆ ವ್ಯಾಜ್ಯಗಳಿರುತ್ತವೆ. ಆದರೆ ಕಕ್ಷಿದಾರರು ಆದಷ್ಟು ಕೋರ್ಟಿಗೆ ಬರುವುದನ್ನು ಕಡಿಮೆ ಮಾಡಬೇಕು. ಬಹಳಷ್ಟು ವ್ಯಾಜ್ಯಗಳನ್ನು ನಮ್ಮಲ್ಲೇ ಇತ್ಯರ್ಥಪಡಿಸಿಕೊಳ್ಳಬಹುದು. ಮಧ್ಯಸ್ಥಿಕೆ ವಹಿಸುವ ಮೂಲಕ, ರಾಜೀ ಮಾಡುವ ಮೂಲಕ ಅನೇಕ ಸಮಸ್ಯೆಗಳು, ವ್ಯಾಜ್ಯಗಳನ್ನು ಇತ್ಯರ್ಥಪಡಿಸಬಹುದು.


ಈ ಉದ್ದೇಶದಿಂದಲೇ ಲೋಕ್ ಅದಾಲತ್‍ನ್ನು ನಡೆಸಲಾಗುತ್ತಿದೆ. ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸಲು ಮತ್ತು ಅವರ ಸಮಯ, ಸಂಬಂಧ, ಹಣ ಉಳಿಸಲು ಲೋಕ್ ಅದಾಲತ್‍ನಲ್ಲಿ ರಾಜೀ ಸೂತ್ರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ವ್ಯಾಜ್ಯಗಳು, ಭಿನ್ನಾಭಿಪ್ರಾಯಗಳು ಕಡಿಮೆಯಾದಷ್ಟು ಸಂತೋಷವಾಗಿರ್ತೀವಿ. ಆದ್ದರಿಂದ ಕಕ್ಷಿದಾರರು ತಮ್ಮ ಭಿನ್ನಾಭಿಪ್ರಾಯವನ್ನು ಸೂಕ್ತ ರೀತಿಯಲ್ಲಿ ನಿವಾರಿಸಿಕೊಳ್ಳಲು ಮನಸ್ಸು ಮಾಡಬೇಕು. ಲೋಕ್ ಅದಾಲತ್‍ನ ಸದುಪಯೋಗ ಪಡೆಯಬೇಕೆಂದರು.


ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿನ 3 ನೇ ಲೋಕ್ ಅದಾಲತ್‍ನ್ನು ಇಂದು ನಡೆಸಲಾಗುತ್ತಿದೆ. ಜಿಲ್ಲೆಯ 12 ಪೀಠಗಳು ಇಂದು ಲೋಕ್ ಅದಾಲತ್‍ನ್ನು ನಿರ್ವಹಣೆ ಮಾಡುತ್ತಿವೆ. 12 ಸಾವಿರ ನ್ಯಾಯಾಲಯದ ಪ್ರಕರಣಗಳು ಮತ್ತು 85 ಸಾವಿರ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ. ಜುಲೈನಲ್ಲಿ ನಡೆದ ಕಳೆದ ಲೋಕ್ ಅದಾಲತ್‍ನಲ್ಲಿ 10691 ನ್ಯಾಯಾಲಯದ ಪ್ರಕರಣಗಳು ಮತ್ತು 78110 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 88801 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು ಎಂದರು.


ಇದೇ ವೇಳೆ ಸಾಂಕೇತಿಕವಾಗಿ ಪ್ರಕರಣಗಳ ರಾಜೀ ಪತ್ರವನ್ನು ವಿತರಿಸಿದರು. ಹೊಳಲೂರಿನ ವ್ಯಾಜ್ಯ ಪ್ರಕ್ರರಣದಲ್ಲಿ ರಾಜೀ ಆದ ಕುಟುಂಗಳ ಕಕ್ಷಿದಾರರಿಗೆ, ಅಪಘಾತ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ ಕಕ್ಷಿದಾರರಿಗೆ ರಾಜೀಪತ್ರ ನೀಡಲಾಯಿತು. ಹಾಗೂ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿ, ರಾಜೀ ಆದ ದಂಪತಿಗೆ ಹಾರ ಬದಲಾಯಿಸಿ, ಸಿಹಿ ನೀಡಿ ರಾಜೀಪತ್ರ ವಿತರಣೆ ಮಾಡಿದರು.


ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್‍ಕುಮಾರ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಅಭಿಯೋಜಕರು, ನ್ಯಾಯವಾದಿಗಳು, ವಿಮಾ ಕಂಪನಿಯ ಅಧಿಕಾರಿಗಳು, ಕಕ್ಷಿದಾರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago