Categories: Shivamogga

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ ; ಮಲೆನಾಡು ರೈತ ಹೋರಾಟ ಸಮಿತಿ ತೀವ್ರ ಖಂಡನೆ

ಶಿವಮೊಗ್ಗ: ಸೊರಬ ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೇ ನಂ. 20 ರಲ್ಲಿ 6 ಕುಟುಂಬಗಳನ್ನು ಅರಣ್ಯಾಧಿಗಳು ಒಕ್ಕಲೆಬ್ಬಿಸಲು ಹೊರಟಿದ್ದು ಸುಮಾರು 20 ಎಕರೆ ಫಸಲು ಬಂದ ತೋಟವನ್ನು ನಾಶ ಮಾಡಲು ಹೊರಟಿದ್ದಾರೆ. ಇದನ್ನು ಮಲೆನಾಡು ರೈತ ಹೋರಾಟ ಸಮಿತಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಳಗುಪ್ಪದ ಸರ್ವೇ ನಂ. 20 ರಲ್ಲಿ ಸುಮಾರು 6 ಕುಟುಂಬಗಳು ತೋಟ ಮಾಡಿಕೊಂಡಿದ್ದಾರೆ. ಹಲವು ವಷಗಳಿಂದ ಸಾಗುವಳಿ ಮಾಡಿ ಕೊಂಡು ಬಂದಿದ್ದಾರೆ. ಇವರ ಹೆಸರಿನಲ್ಲಿ ದಾಖಲೆಗಳೂ ಇವೆ. ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಸುಮಾರು 8 ಕಾಯ್ದೆಗಳು ಜೀವಂತವಾಗಿವೆ. ಅದರಲ್ಲಿ 1963 ರ ಕಾಯ್ದೆ ಪ್ರಕಾರ ಇಬ್ಬರು ರೈತ ರನ್ನು ಒಕ್ಕಲೆಬ್ಬಿಸುವ ಹಾಗೆಯೇ ಇಲ್ಲ. ಇನ್ನುಳಿದ ನಾಲ್ಕು ರೈತರು ಅರ್ಜಿ ಹಾಕಿಕೊಂಡು ಕಾಯುತ್ತಿದ್ದಾರೆ. ಇವರ ಜೊತೆಗೆ 80 ಸಾವಿರ ಅರ್ಜಿಗಳಿವೆ. ಅವರೆಲ್ಲರನ್ನೂ ಬಿಟ್ಟು ಇವರಿಗೆ ಮಾತ್ರ ನೋಟಿಸ್ ನೀಡಿದ್ದಾರೆ ಎಂದು ದೂರಿದರು.

ಈ ಹಿಂದೆಯೂ ಸುಮಾರು 41 ರೈತರನ್ನು ಒಕ್ಕಲೆಬ್ಬಿಸಿದ್ದರು. 110 ಕ್ಕೂ ಹೆಚ್ಚು ಕೇಸ್ ಗಳನ್ನು ಅರಣ್ಯ ಅಧಿಕಾರಿಗಳು ದಾಖಲಿಸಿದ್ದರು. ಸರ್ಕಾರದ ಮಾತನ್ನೇ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ನನ್ನ ಜೀವ ಇರುವತನಕ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದರು. ಆದರೆ, ಆ ಶಪಥ ಈಗ ಸುಳ್ಳಾಗಿದೆ ಎಂದರು.

ದಿ. ಬಂಗಾರಪ್ಪನವರ ಕ್ರಿಯಾಶೀಲತೆ ಈಗಿರುವ ಅವರ ಮಕ್ಕಳಾದ ಇಬ್ಬರಿಗೂ ಬರುವುದಿಲ್ಲ. ಒಬ್ಬರ ಮೇಲೊಬ್ಬರು ಹೇಳುತ್ತಾರೆ. ಆಡಳಿತ ಪಕ್ಷ ಬಗರ್ ಹುಕುಂ ಸಾಗುವಳಿದಾರರ ವಿರುದ್ಧವಾಗಿ ಕೆಲಸ ಮಾಡಿದರೆ ವಿರೋಧ ಪಕ್ಷ ನ್ಯಾಯ ಕೊಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ರೈತರ ನೋವು ಹೆಚ್ಚಾಗಿದೆ. ಇರುವ ತೋಟವನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿ ರೈತರಿದ್ದಾರೆ. ಈಗಾಗಲೇ ರೈತರ ತೋಟಕ್ಕೆ ಜೆಸಿಬಿಗಳು ಬಂದು ನಿಂತಿವೆ. ತೋಟ ಉಳಿಸಿ ಕೊಳ್ಳಲು ಆ 6 ಕುಟುಂಬಗಳು ಹೆಣಗಾಡುತ್ತಿವೆ ಎಂದರು.

ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ತಡೆಯಲು ಹಲವು ಕಾನೂನಿಗಳಿದ್ದರೂ ಅಧಿಕಾರಿಗಳು ಕೇಳುತ್ತಿಲ್ಲ. ಅದರಲ್ಲೂ ಅರಣ್ಯಾಧಿಕಾರಿಗಳ ದೌರ್ಜನ್ಯ ಹೆಚ್ಚಾಗಿದೆ. ಅವರ ನೋವು ತಟ್ಟದೇ ಇರುವುದಿಲ್ಲ. ಆಡಳಿತ ಪಕ್ಷಕ್ಕೂ ಕೂಡ ರೈತರ ಶಾಪ ತಟ್ಟುತ್ತದೆ. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಿ 6 ಕುಟುಂಬದ ರೈತರ 20 ಎಕರೆ ಅಡಿಕೆ ತೋಟವನ್ನು ನಾಶ ಮಾಡದಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾ ಎಲ್.ವಿ. ಸುಭಾಷ್, ಕೃಷ್ಣಮೂರ್ತಿ ಹೆಗ್ಗೋಡು, ಲೋಕೇಶ್ ಇದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

2 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

15 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

18 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

18 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

23 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago