ಶಿವಮೊಗ್ಗ : ಹಿಂದಿನ ಚುನಾವಣೆಯಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮೋದಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಒಂದಾದ ಮೇಲೆ ಒಂದರಂತೆ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಬರುತ್ತಿವೆ. ಯಾವ ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪವಿದೆ ಅವರ ವಿರುದ್ಧ ತನಿಖೆ ಮಾಡಿ. ತಪ್ಪು ಮಾಡಿರುವುದು ತಿಳಿದು ಬಂದರೆ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಮಂತ್ರಿಗಳ ಮೇಲೆ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ಇನ್ನು 6 ತಿಂಗಳಲ್ಲಿ ಬೀಳಲಿದೆ ಎಂಬ ಬಸವರಾಜ ಯತ್ನಾಳ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…