ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ ; ಶಾಸಕ ಗೋಪಾಲಕೃಷ್ಣ ಬೇಳೂರು


ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.


ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರ ಸದುಪಯೋಗವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದರ ಮೂಲಕ ಅವರುಗಳು ಶೈಕ್ಷಣಿಕ ಅಭಿವೃದ್ಧಿಗೆ ಪ್ರೇರೇಪಣೆ ನೀಡಬೇಕು. ಆಗ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.


ನಾನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಕಾಲೇಜಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿಯನ್ನು ಕೊಡಬೇಕು, ಹಾಗೆಯೇ 2024 ರ ಮಾರ್ಚ್‌ನಲ್ಲಿ ನಡೆಯುವ ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣವಾಗುವಂತೆ ಪಾಠ ಪ್ರವಚನಗಳನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ವಿಗೆ ಕಾರಣ ಭೂತರಾಗಬೇಕೆಂದು ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವಿಸಿ ಅಭಿನಂದಿಸಿದರು
ಸಭೆಯಲ್ಲಿ ಕಾಲೇಜಿನ ಪ್ರಾಚಾರ್ಯ ಎ. ಮಂಜುನಾಥ್. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಸದಸ್ಯರುಗಳಾದ ಮಹಮ್ಮದ್ ರಫಿ, ನಾಗಪ್ಪ ಕಟ್ಟೆ, ಲೇಖನ, ಬೋರಪ್ಪ, ಷಣ್ಮುಖ, ಕಾಲೇಜಿನ ಹಿರಿಯ ಉಪನ್ಯಾಸಕಿ ಗೋಪಿಕಾ ಇನ್ನಿತರರಿದ್ದರು.


ಉಪನ್ಯಾಸಕರಾದ ಸಭಾಸ್ಟಿನ್ ಸ್ವಾಗತಿಸಿ, ಅಂಬಿಕಾ ಸಾಗರ್ ನಿರೂಪಿಸಿ, ಜನಾರ್ಧನ್ ಬಿ.ನಾಯಕ್ ವಂದಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

6 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

10 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

10 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

12 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

13 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

20 hours ago