Categories: Shivamogga

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ | ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ

ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು.

ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು.

ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು
ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕಿದೆ. ಚಾರಿತ್ಯ ರಹಿತ ವಿದ್ಯೆ ನಿರುಪಯುಕ್ತವಾದದು.

ಶಿವಮೊಗ್ಗ ಜಿಲ್ಲೆಯಿಂದ ದೇಶಕ್ಕಾಗಿ ತನುಮನ ಧನ ನೀಡಿದ ಸೈನಿಕರು ಹೆಚ್ಚು. ಅಂತಹ ರಾಷ್ಟ್ರಪ್ರೇಮವೇ ಎನ್ಇಎಸ್ ಸಂಸ್ಥೆಯಂತಹ ಸಮೂಹ ಮೂಡಿಬರಲು ಕಾರಣ. ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಎನ್ಇಎಸ್ ವಿದ್ಯಾರ್ಥಿಗಳು ವಿಶೇಷವಾಗಿ ಗುರುತಿಸಿಕೊಳ್ಳಬಲ್ಲರು.

ದೇಶವನ್ನು ಒಟ್ಟುಗೂಡಿಸುವ ರಾಷ್ಟ್ರೀಯತೆ ಶುರುವಾದದ್ದೆ 1948 ರ ನಂತರ. ಅದರೇ 1946 ರಲ್ಲಿಯೇ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯತೆಯ ಪರಿಕಲ್ಪನೆಯನ್ನ ಮೆರೆದದ್ದು ಅದ್ಭುತ.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮಾನವೀಯ ಮೌಲ್ಯಗಳೊಂದಿಗೆ ಎನ್ಇಎಸ್ ಅಮೃತ ವರ್ಷ ಯಶಸ್ವಿಯಾಗಿ ಮೂಡಿದೆ‌. ಗ್ರಾಮೀಣದ ಭಾಗದಲ್ಲಿ ಶೈಕ್ಷಣಿಕ ಶ್ರೇಷ್ಟತೆ ನೀಡುವಲ್ಲಿ ಎನ್ಇಎಸ್ ಸಂಸ್ಥೆ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ.

ಕಾರ್ಯಕ್ರಮದಲ್ಲಿ ಎನ್ಇಎಸ್ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಜಿ.ರಾಮಚಂದ್ರಮೂರ್ತಿ, ಡಿ.ಎಸ್.ಅರುಣ್, ಅನಂತದತ್ತಾ, ಮಧುರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಎನ್ಇಎಸ್ ನೂತನ ಕೈಪಿಡಿ ಹಾಗೂ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.


ಮನಸೆಳೆದ ಮೆರವಣಿಗೆಯ ಕಲಾತಂಡಗಳು :

ಬೆಳಗ್ಗೆ ಎನ್ಇಎಸ್ ಕಛೇರಿ ಮುಂಭಾಗದ ಎಸ್.ಆರ್.ನಾಗಪ್ಪಶೆಟ್ಟಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದ ನಂತರ ಪ್ರಾರಂಭವಾದ ಮೆರವಣಿಗೆಯಲ್ಲಿ ವೀರೇಂದ್ರ ಹೆಗ್ಗಡೆ ಹಾಗೂ ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅವರು ಕುಳಿತ ಸಾರೋಟು ಕಂಗೊಳಿಸಿತು. ಮೆರವಣಿಗೆಯಲ್ಲಿ ಮಕ್ಕಳಿಂದ ವಿವಿಧ ಕಲಾಪ್ರಕಾರಗಳು ಅನಾವರಗೊಂಡಿತು. ಕೀಲುಕುದುರೆ, ಲಂಬಾಣಿ ನೃತ್ಯ, ಕಂಸಾಳೆ, ತಟ್ಟಿರಾಯ ಗೊಂಬೆಗಳು ನೋಡುಗರ ಮನಸೆಳೆಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

23 hours ago