Categories: Shivamogga

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ ; ಡಾ.ಆರ್.ಸೆಲ್ವಮಣಿ


ಶಿವಮೊಗ್ಗ : ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.


ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಸಿದ್ದತೆ ಕುರಿತು ಮಾಹಿತಿ ನೀಡಿದರು.


ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತವು ಸಾರ್ವಜನಿಕರನ್ನು ಸ್ವಾಗತಿಸುತ್ತಿದ್ದು, 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 02 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 04 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂಧೋಬಸ್ತ್ ಮಾಡಲಾಗಿದೆ ಎಂದರು.


ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ:
ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‌ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ರೂ.995 ಕೋಟಿ ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, ರೂ.97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ.862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ.91.50 ಕೋಟಿ ಮೊತ್ತದ ಕಾಮಗಾರಿ ಲೋಕಾರ್ಪಣೆ ರೂ.66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ.96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. ರೂ.56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿ. ಒಟ್ಟು ರೂ.896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮಥ್ರ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಪ್ರಧಾನಮಂತ್ರಿಗಳು ನೆರವೇರಿಸುವರು ಎಂದು ಮಾಹಿತಿ ನೀಡಿದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು.
ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ತಿಳಿಸಿದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

8 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

9 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

9 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

10 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

12 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

15 hours ago