ಶಿಕ್ಷಣದ ಜೊತೆಗೆ ಸಂಸ್ಕಾರವೂ ಬೆಳೆಯಲಿ ; ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು

0 183

ಶಿವಮೊಗ್ಗ : ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಅತೀ ಮುಖ್ಯವಾಗಿದೆ. ಶಿಕ್ಷಣದ ಜೊತೆಗೆ ಸಂಸ್ಕಾರ ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ನುಡಿದರು.

ಅವರು ಗುರುವಾರ ಸಂಜೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಶ್ರೀ ಕುಂಭೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ ಲಿಂ. ಚಂದ್ರಮೌಳೀಶ್ವರ ಶಿವಾಚಾರ್ಯ ಸ್ವಾಮಿಗಳ 9ನೇ ವರ್ಷದ ಸ್ಮರಣ ದಿನೋತ್ಸವ ಅಂಗವಾಗಿ ಜರುಗಿದ ಸಮಾರಂಭದಲ್ಲಿ ಆಶೀರ್ವಚನ ನೀಡಿ, ಕುಂಭೇಶ್ವರ ವಿದ್ಯಾ ಸಂಸ್ಥೆಯು ಶ್ರೀ ರಾಮಲಿಂಗೇಶ್ವರ ಮಠದ ಸಹಯೋಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ತಮಗೆ ಸಂತಸ ಸಮಾಧಾನ ತಂದಿದ್ದು ಗ್ರ‍್ರಾಮೀಣ ಮಕ್ಕಳು ಇದರ ಉಪಯೋಗ ಪಡೆಯುವಂತಾಗಲಿ ಎಂದರು.

ಅಧ್ಯಕ್ಷತೆ ವಹಿಸಿದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಉತ್ತಮ ಶಿಕ್ಷಕರನ್ನು ಹೊಂದಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ದಿಶೆಯಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಆಡಳಿತ ಮಂಡಳಿಯ ಆಡಳಿತಾಧಿಕಾರಿ ಜಗದೀಶ್ವರಯ್ಯ ಜ್ಯೋತಿ ಬೆಳಗುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಕಿರಿಯ ತರಬೇತಿ ಅಧಿಕಾರಿ ಕೆ.ಎಂ. ರುದ್ರಪ್ಪ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಶಿಕ್ಷಕ ನಾಗರಾಜ್ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಮುಖ್ಯ ಶಿಕ್ಷಕಿ ಎಸ್. ಭಾಗ್ಯವತಿ ವಂದಾನಾರ್ಪಣೆ ಮಾಡಿದರು. ಸಮಾರಂಭದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Leave A Reply

Your email address will not be published.

error: Content is protected !!