Categories: Shivamogga

ಶಿವಮೊಗ್ಗದಲ್ಲಿ ಫೆ. 24 ರಂದು 5 ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ; ಮಧು ಬಂಗಾರಪ್ಪ

ಶಿವಮೊಗ್ಗ : ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪರವರು ತಿಳಿಸಿದರು.

ಅವರು ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆದಿರುವ ಫೆ. 24ರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದವರು ನುಡಿದರು.

ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.

ಜಿಲ್ಲಾ ಮಟ್ಟದಲ್ಲಿ ಆಯೋಜನೆಗೊಳ್ಳುತ್ತಿರುವ ಈ ಕಾರ್ಯಕ್ರಮಕ್ಕೆ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಲಿದ್ದಾರೆ ಎಂದವರು ನುಡಿದರು.

ಜಿಲ್ಲಾಡಳಿತದಿಂದ ಆಯೋಜನೆಗೊಂಡಿರುವ ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಅತಿಥಿಗಳನ್ನು ಆಹ್ವಾನಿಸಲಾಗುವುದು ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೊಸ ಬಸ್‍ಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಪ್ರಸ್ತುತ ಜಿಲ್ಲೆಯ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ನೂರು ಬಸ್‍ಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಹಂತಹಂತವಾಗಿ ಬಸ್‌ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದರು.

ರಾಜ್ಯದ ಬಹುತೇಕ ಕುಟುಂಬಗಳ ಸದಸ್ಯರು ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವುದು ವೈಯಕ್ತಿಕವಾಗಿ ಸಂತೋಷವಾಗಿದೆ ಎಂದ ಅವರು ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ನನಗಿದೆ ಎಂದವರು ನುಡಿದರು.

ಈ ಕಾರ್ಯಕ್ರಮ ನಡೆಯುವ ದಿನದಂದು ಅಲ್ಲಮಪ್ರಭು ಮೈದಾನದ ಹೊರಾಂಗಣದ ಬಿತ್ತಿಯಲ್ಲಿ ಅಲ್ಲಮಪ್ರಭುಗಳ ವಚನದ ಸಾಲುಗಳನ್ನು ಪ್ರಕಟಿಸಲಾಗುವುದು ಎಂದರು.

ವಿಶೇಷವಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಐದು ದಿನಗಳ ಕಾಲ ಪೌಷ್ಟಿಕ ಆಹಾರ ಹಾಲು ಮತ್ತು ಎರಡು ದಿನಗಳ ಕಾಲ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ವಾರದ ನಾಲ್ಕು ದಿನಗಳ ಕಾಲ ಮಕ್ಕಳಿಗೆ ಪೌಷ್ಟಿಕ ಆಹಾರ ರಾಗಿ ಮಾಲ್ಟನ್ನು ನೀಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ರಾಜ್ಯದ 59 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯುತ್ತಿರುವುದು ವಿಶೇಷವಾಗಿದೆ.
– ಮಧು ಬಂಗಾರಪ್ಪ

ಈವರೆಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದಿರುವ ವಂಚಿತರ ಅನುಕೂಲಕ್ಕಾಗಿ ವೇದಿಕೆಯ ಇಕ್ಕೆಲಗಳಲ್ಲಿ ದೂರು ಸ್ವೀಕಾರ ಹಾಗೂ ಸಮಸ್ಯೆ ನಿವಾರಣೆಗೆ ಸಲಹಾ ಕೊಠಡಿಗಳನ್ನು ಸ್ಥಾಪಿಸಲಾಗುವುದು. ಅರ್ಹರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.

ಪ್ರಸ್ತುತ ಆಡಳಿತಾರೂಡ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸದುದ್ದೇಶದಿಂದ ಕಳೆದ ಸಾಲಿನಲ್ಲಿ ಶಿಕ್ಷಣ ಇಲಾಖೆಗೆ ನಿಗದಿಗೊಳಿಸಿದ 37 ಸಾವಿರ ಕೋಟಿ ಅನುದಾನವನ್ನು ಪ್ರಸಕ್ತ ಸಾಲಿಗೆ 44,000 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದವರು ತಿಳಿಸಿದರು.

ಸಚಿವರ ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಜಿಲ್ಲಾ ಪೊಲೀಸ್ ಅಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ಫೆಬ್ರವರಿ 24ರಂದು ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ವಿ ಅನುಷ್ಟಾನ ಹಾಗೂ ಉಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ವೇದಿಕೆಯ ಮುಂಬಾಗದಲ್ಲಿ ಫಲ-ಪುಷ್ಟ ಹಾಗೂ ಸಿರಿಧಾನ್ಯಗಳಿಂದ ಅಲಂಕರಿಸಲಾಗುವುದು. ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗಾಗಿ ಅವಶ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
– ಗುರುದತ್ತ ಹೆಗಡೆ, ಶಿವಮೊಗ್ಗ ಡಿಸಿ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago