Categories: Shivamogga

ಶಿವಮೊಗ್ಗ ದಸರಾ ಯಶಸ್ವಿಯಾಗಿ ನಡೆಯಲು ನಗರದೆಲ್ಲೆಡೆ ವಿಶೇಷ ಅಲಂಕಾರ

ಶಿವಮೊಗ್ಗ: ಶಿವಮೊಗ್ಗ ದಸರಾ ಯಶಸ್ವಿಯಾಗಿ ನಡೆಯಲು ಇಡೀ ನಗರವನ್ನು 9 ದಿನಗಳ ಕಾಲ ಅಲಂಕಾರ ಮಾಡಲಾಗುತ್ತಿದೆ ಎಂದು ಅಲಂಕಾರ ಸಮಿತಿಯ ಅಧ್ಯಕ್ಷ ಪ್ರಭಾಕರ್ ಪಿ. (ಪ್ರಭು) ಹೇಳಿದರು.


ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,
ಈ ಬಾರಿಯ ದಸರಾವನ್ನು ಯಶಸ್ವಿಯಾಗಿ ಮತ್ತು ಅಂದವಾಗಿ ಕಾಣುವಂತೆ ಮಾಡಲು ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ, ವೃತ್ತಗಳಲ್ಲಿ ಹಾಗೂ ಅಂಬಾರಿ ಬರುವ ಸ್ಥಳಗಳಲ್ಲಿ, ಅಲಂಕಾರ ದಸರಾ ಸಮಿತಿಯಿಂದ ವಿವಿಧ ರೀತಿಯ ವಿದ್ಯುತ್ ದೀಪಾಲಂಕಾರದಿಂದ ನಗರವನ್ನು ಕಂಗೊಳಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.


ಮೆರವಣಿಗೆಯನ್ನು ಪ್ರಾರಂಭಿಸುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ರಾಮಣ್ಣ ಶ್ರೇಷ್ಠಿ ವೃತ್ತದ ಮುಖಾಂತರ ಶಿವಪ್ಪ ನಾಯಕ ವೃತ್ತದವರೆಗೆ ವಿದ್ಯುತ್ ದೀಪ ಅಲಂಕಾರವನ್ನು ಮಾಡಲಾಗುತ್ತದೆ. ಬೆಕ್ಕಿನ ಕಲ್ಮಠದಿಂದ ಮೀನಾಕ್ಷಿ ಭವನ, ಶಿವಪ್ಪ ನಾಯಕ ವೃತ್ತದಿಂದ, ಅಶೋಕ ವೃತ್ತದ ವರೆಗೆ ಅಲಂಕಾರಿಕ ವಿದ್ಯುತ್ ಲೈಟ್‌ಗಳನ್ನು ತೋರಣದ ರೀತಿಯಲ್ಲಿ ಅಳವಡಿಸಲಾಗಿದೆ ಎಂದರು.


ಹಾಗೆಯೇ ಶಿವಪ್ಪ ನಾಯಕ ವೃತ್ತದಿಂದ ಟಿ.ಶೀನಪ್ಪ ಶೆಟ್ಟಿ, ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಲಕ್ಷ್ಮಿ ಟಾಕೀಸ್ ವೃತ್ತದವರೆಗೆ ಸಾಗಿ ಫ್ರೀಡಂ ಪಾರ್ಕ್ವರೆಗೆ ವಿಶೇಷ ರೀತಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತಿದೆ. ಟಿ.ಶೀನಪ್ಪ ಶೆಟ್ಟಿ ವೃತ್ತದಿಂದ ಅಮೀರ್ ಅಹ್ಮದ್ ಸರ್ಕಲ್ ವರೆಗೆ ವಿಶೇಷ ರೀತಿಯ ವಿದ್ಯುತ್ ಬಲ್ಬ್ಗಳಿಂದ ನಿರ್ಮಿಸಿರುವ ತೋರಣ ರೀತಿಯ ಅಲಂಕಾರ ಮಾಡಲಾಗುತ್ತಿದೆ ಎಂದರು.


ದಸರಾ ಉತ್ಸವವು 9 ದಿನಗಳು ಆಚರಿಸುವುದರಿಂದ ಉಷಾ ನರ್ಸಿಂಗ್ ಹೋಮ್ ವೃತ್ತದಿಂದ ಭಗತ್ ಸಿಂಗ್ ವೃತ್ತದ ವರೆಗೆ ಲಕ್ಷ್ಮೀ ಟಾಕೀಸ್ ಮಾರ್ಗವಾಗಿ ಫ್ರೀಡಂ ಪಾರ್ಕ್ ಮುಂಭಾಗದಿAದ ನವರಾತ್ರಿ 9 ದಿನಗಳಲ್ಲೂ ವಿದ್ಯುತ್ ದೀಪ ಅಲಂಕಾರವನ್ನು ಮಾಡಲಾಗುತ್ತಿದೆ ಎಂದರು.
ನಗರದ ವಿವಿಧ ವೃತ್ತಗಳಲ್ಲಿ  ದೇವರ ವಿಗ್ರಹಗಳನ್ನು ಸ್ಥಾಪಿಸಲಾಗುತ್ತಿದೆ. ನೆಹರು ರಸ್ತೆಯಲ್ಲಿ ನವದುರ್ಗೆಯರ ಫ್ಲೆಕ್ಸ್ಗಳನ್ನು ಅಳವಡಿಸಲಾಗುವುದು. ಫ್ರೀಡಂ ಪಾರ್ಕಿನಲ್ಲಿ ಚಂದ್ರಯಾನ ಉಪಗ್ರಹದ ಕಲಾಕೃತಿ ನಿರ್ಮಿಸಲಾಗಿದೆ. ಲಕ್ಷ್ಮಿ ವೃತ್ತದಲ್ಲಿ ಶ್ರೀ ರಾಮ ದೇವರ ಮಹಾದ್ವಾರ ನಿರ್ಮಾಣ ಮಾಡಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಎಲ್‌ಇಡಿ ವಾಲ್‌ಗಳನ್ನು ಅಳವಡಿಸಲಾಗಿದೆ ಎಂದರು.


ಇದಲ್ಲದೆ ನಗರದ ವಾಣಿಜ್ಯ ಮಳಿಗೆಗಳು ಹಾಗೂ ಮುಖ್ಯ ರಸ್ತೆಯಲ್ಲಿನ ಕಟ್ಟಡಗಳಿಗೆ ಸ್ವಯಂಪ್ರೇರಿತವಾಗಿ ವಿದ್ಯುತ್ ದೀಪಾಲಂಕಾರವನ್ನು ಮಾಡಿಕೊಳ್ಳಲು ಸಾರ್ವಜನಿಕರಿಗೆ ಹಾಗೂ ವಾಣಿಜ್ಯೋದ್ಯಮಿಗಳಿಗೆ ಕೋರಲಾಗಿದೆ. ಒಟ್ಟಾರೆ ನಾಡಹಬ್ಬವನ್ನು ವಿಶೇಷ ಅಲಂಕಾರದ ಮೂಲಕ ಸುಂದರವಾಗಿ ಆಚರಿಸಲು ಸಮಿತಿ ನಿರ್ಧರಿಸಿದೆ ಎಂದರು.


ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಮೈಸೂರು ದಸರಾ ಬಿಟ್ಟರೆ ಶಿವಮೊಗ್ಗ ದಸರಾಕ್ಕೆ ತನ್ನದೇ ಆದ ಇತಿಹಾಸ ಇದೆ. ಈ ಹಬ್ಬವನ್ನು ಮುಂದಿನ ದಿನಗಳಲ್ಲಿ ಇನ್ನೂ ಸುಂದರವಾಗಿಸಲು ಮತ್ತು ಮೆರವಣಿಗೆಗೆ ಅನುಕೂಲವಾಗುವಂತೆ ಮಾಡಲು ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳನ್ನು ತೆಗೆದುಹಾಕಿ ಕೇಬಲ್ ಮೂಲಕ ಅಳವಡಿಸಲಾಗುವುದು. ಹಾಗೆಯೇ ಶಾಸಕರ ಅನುದಾನವೂ ಸೇರಿದಂತೆ ಸರ್ಕಾರದ ನೆರವು ಪಡೆದು ಶಾಶ್ವತ ಕಾರ್ಯಕ್ರಮಗಳನ್ನು ರೂಪಿಸಲು ಅಗತ್ಯ ಯೋಜನೆ  ಕೈಗೊಳ್ಳಲಾಗುವುದು ಎಂದರು.


ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಎಸ್. ಶಿವಕುಮಾರ್, ಸದಸ್ಯರಾದ ಜ್ಞಾನೇಶ್ವರ್, ಸುವರ್ಣಾ ಶಂಕರ್, ಅಧಿಕಾರಿಗಳಾದ ಹರೀಶ್, ದೀಪಕ್, ಪವನ್ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago