ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ನಗರದ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹ್ಯೂಂಡಾಯ್ ಕಾರ್ಶೋ ರೂಂಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ಕಾರು ಮತ್ತು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.
ರಾತ್ರಿ 10 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂನಲ್ಲಿದ್ದ ಹೊಸ ಕಾರುಗಳು ಹಾಗೂ ಸರ್ವಿಸ್ ಗೆ ಬಂದಿದ್ದ ಲಕ್ಷಾಂತರ ರೂ. ಮೌಲ್ಯದ ಕಾರುಗಳು ಭಾಗಶಃ ಅಥವಾ ಪೂರ್ಣ ಬೆಂಕಿಗಾಹುತಿ ಆಗಿರುವುದಾಗಿ ತಿಳಿದುಬಂದಿದೆ.
ಶೋ ರೂಂ ಮೇಲ್ಬಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಬೆಂಕಿ ಜೋರಾಗಿದ್ದು, ಪಕ್ಕದ ಆದಿಶಕ್ತಿ ಟಾಟಾ ಶೋ ರೂಂಗೂ ಬೆಂಕಿ ತಗುಲಿದೆ. ಕೂಡಲೇ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.
ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋ ರೂಂ ಬಳಿ ಜಮಾಯಿಸಿದ್ದಾರೆ. ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…