ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ; ಪರಿಶೀಲನೆ

0 61

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಡಿಸಿ ಡಾ. ಸೆಲ್ವಮಣಿ , ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಶಿವಮೊಗ್ಗ ವಿಮಾನ ನಿಲ್ದಾಣ ಹಗಲು ಮತ್ತು ರಾತ್ರಿಯ ಕಾರ್ಯಚರಣೆ ವ್ಯವಸ್ಥೆ ಹೊಂದಿದೆ. ಅತ್ಯಾಧುನಿಕವಾಗಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಸದುಪಯೋಗವನ್ನು ಮಧ್ಯ ಕರ್ನಾಟಕದ ಜನತೆ ಬಳಸಿಕೊಳ್ಳಬೇಕು. ವಿಮಾನಯಾನದ ಸೌಕರ್ಯ ಲಭ್ಯವಾದ ಬಳಿಕಗಳ ಅಭಿವೃದ್ಧಿಗೆ ಇದು ನೆರವಾಗಲಿದೆ. ಜಿಲ್ಲೆಗೆ ಕೈಗಾರಿಕೆಗಳನ್ನು ತರುವ ನಿಟ್ಟಿನಲ್ಲಿ ಕೂಡ ನಮ್ಮ ಪ್ರಯತ್ನ ಸಾಗಿದೆ ಎಂದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/mK_0GFEoMq/?mibextid=NnVzG8

ವಿಮಾನ ನಿಲ್ದಾಣ ಕಾಮಗಾರಿಯಲ್ಲಿ ಕಳಪೆ ಆಗಿರುವ ವಿಚಾರ ಮಾತನಾಡಿ, ಈ ಬಗ್ಗೆ ಸಚಿವ ಎಂ ಬಿ ಪಾಟೀಲರಿಗೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ, ಜಿಲ್ಲೆಯಲ್ಲಿ ಬಹುತೇಕ ಹಿಂದಿನ ಸರ್ಕಾರದಲ್ಲಿ ನಡೆದ ಕಾಮಗಾರಿಗಳು ಕಳಪೆಯಾಗಿರುವ ಕುರಿತು ದೂರು ಬಂದಿದೆ. ಇಂದು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೆಪ್ಟೆಂಬರ್ 2 ಅಥವಾ 3 ರಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಅಲ್ಲಿ ಚರ್ಚಿಸುತ್ತೇನೆ. ಆನಂತರ ಕಳಪೆಯಾಗಿರುವ ಕಾಮಗಾರಿಗಳ ಬಗ್ಗೆ ತನಿಖೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು‌.

ನಾಳೆ ಬೆಳಗ್ಗೆ ನಾರಾಯಣ ಗುರು ಜಯಂತಿಯಲ್ಲಿ ಪಾಲ್ಗೊಂಡು ನಂತರ ವಿಮಾನದ ಮೂಲಕ ಬೆಂಗಳೂರಿಗೆ ತೆರಳುತ್ತೇನೆ. ನಾಳೆ ವಿಮಾನ ನಿಲ್ದಾಣ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವನಾಗಿ ಪಾಲ್ಗೊಳ್ಳುತ್ತೇನೆ ಎಂದರು.

Leave A Reply

Your email address will not be published.

error: Content is protected !!