ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರು ಘೋಷಣೆ ಮಾಡಿದ ಬಿ.ಎಸ್ ಯಡಿಯೂರಪ್ಪ ; ಯಾರ ಹೆಸರು ಪ್ರಕಟಿಸಿದರು ಗೊತ್ತಾ ?

0 93

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ. ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಲು ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಹಲವು ದಿನಗಳಿಂದ ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport)ದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟಪಡಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ನೈಟ್‌ಲ್ಯಾಂಡ್, ಅತ್ಯಾಧುನಿಕ ವ್ಯವಸ್ಥೆಹೊಂದಿದೆ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi)ಯವರು ಶಿವಮೊಗ್ಗಕ್ಕೆ ಬರುವುದು ನಿಶ್ಚಿತವಾಗಿದ್ದು ಉದ್ಘಾಟನೆ (Inauguration) ಮಾಡಲಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ(Shivamogga airport)ಕ್ಕೆ ತಮ್ಮ ಹೆಸರಿನ ಬದಲು, 1964 ರಲ್ಲೇ ರಾಷ್ಟ್ರಕವಿ ಕೀರ್ತಿಗೆ ಪಾತ್ರರಾದ, ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಹೀಗಾಗಿ ರಾಷ್ಟ್ರಕವಿ ಕುವೆಂಪು ಹೆಸರಿಡಲು ತೀರ್ಮಾನಿಸಲಾಗಿದೆ. ನಾಳೆ ಆ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಕೇಂದ್ರಕ್ಕೆ ಕಳಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ:

ಮುಂಬರುವ ಚುನಾವಣೆ(Assembly election)ಯಲ್ಲಿ ಬಿಜೆಪಿ(BJP) 140ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಚುನಾವಣೆ ಮತ್ತು ಮುಂದಿನ ಚುನಾವಣೆಯಲ್ಲಿ ಸಕ್ರಿಯ ರಾಜಕಾರಣ ಮಾಡುತ್ತೇನೆ. ಯಾವುದೇ ಸ್ಥಾನಮಾನ ಇಲ್ಲದೆ ದುಡಿಯುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಮುಂದಿರುವ ಸವಾಲು. ಈ ಸವಾಲನ್ನು ಸಮರ್ಥವಾಗಿ ಎದುರಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇನೆ ಎಂದು ಶಪಥ ಮಾಡಿದರು.

Leave A Reply

Your email address will not be published.

error: Content is protected !!