ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

0 36

ಶಿವಮೊಗ್ಗ : ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲಾಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದ್ದಾರೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ ಎಂದಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆ ದಿನ 3 ಲಕ್ಷ ಜನ ಸೇರಲಿದ್ದಾರೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರೆ ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ನೆಮ್ಮದಿ ಸುದ್ದಿ ನೀಡಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.ಶಿವಮೊಗ್ಗದ ಐಬಿಯಲ್ಲಿ ಇಂದು ವಿಐಎಸ್‌ಎಲ್ ಕಾರ್ಮಿಕ ಮುಖಂಡರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ, ಅದನ್ನು ಪುನಶ್ಚೇತನಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ಕಾರ್ಖಾನೆ ಮುಚ್ಚುವ ಆದೇಶ ನಿಲ್ಲಿಸುವ ಕೆಲಸ ಮಾಡುತ್ತೇವೆ ಎಂದರು.

ವಿಐಎಸ್‌ಎಎಲ್ ಕಾರ್ಖಾನೆ ಉಳಿಸಲು ಆಗ್ರಹಿಸಿ ಕಾರ್ಖಾನೆ ಮುಂದೆ ಕಾರ್ಮಿಕರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಕ್ಕೆ ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ಸದ್ಯ ಕಾರ್ಮಿಕರು ನಿರಾಳರಾಗಿದ್ದಾರೆ.

Leave A Reply

Your email address will not be published.

error: Content is protected !!