Categories: Shivamogga

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತು ಪೂರ್ವಭಾವಿ ಸಭೆ


ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.


ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ವೇಳೆ ನೀಡಿರುವ ಅಂಶಗಳು ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.


78 ಆಸನ ವ್ಯವಸ್ಥೆಯುಳ್ಳ ಎಟಿಆರ್-72 ಇಂಡಿಗೋ ವಿಮಾನ ಆ.11 ರಂದು ಕಾರ್ಯಾಚರಣೆ ನಡೆಸಲಿದ್ದು, ಅವರು ಅಬ್ಸರ್ವೇಷನ್ ನಲ್ಲಿ ಕೇಳಿರುವ ಸೌಕರ್ಯಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ವಿಮಾಣ ನಿಲ್ದಾಣ ನಿರ್ದೇಶಕರಿಗೆ ಸೂಚಿಸಿದರು.
ಹಾಗೂ ವಿಮಾನ ನಿಲ್ದಾಣದ ಅಧಿಕೃತ ವೆಬ್‍ಸೈಟ್ ನ್ನು ಅಭಿವೃದ್ದಿಪಡಿಸಿ ಅಂದು ಗಣ್ಯರಿಂದ ಲೋಕಾರ್ಪಣೆ ಮಾಡಿಸಬೇಕು. ಗಣ್ಯರ ಸ್ವಾಗತ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.


ವಿಮಾನ ನಿಲ್ದಾಣಕ್ಕೆ ಅಗತ್ಯವಾದ ವಾಹನಗಳ ಸೌಕರ್ಯ, ಕಾಫಿ-ತಿಂಡಿ ಮಳಿಗೆಗಳು, ಅಗತ್ಯ ಆಂಬುಲೆನ್ಸ್ ಹಾಗೂ ಜಿಲ್ಲಾ ಪ್ರವಾಸೋದ್ಯಮಕ್ಕೆ ಒಂದು ಪ್ರತ್ಯೇಕ ಮಳಿಗೆಯನ್ನು ಸಿದ್ದಪಡಿಸುವಂತೆ ತಿಳಿಸಿದರು.
ವಿಮಾನದ ನಿಲ್ದಾಣದ ಸುತ್ತಮುತ್ತ ನಿಯಮಾನುಸಾರ ಬಫರ್ ಝೋನ್ ಅಧಿಸೂಚನೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು ಅಂದು ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಎಲ್ಲ ಅಂಶಗಳ ಕುರಿತು ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಶಿವಮೊಗ್ಗ ವಿಮಾನ ನಿಲ್ದಾಣ ನಿರ್ದೇಶಕ ಕ್ಯಾಪ್ಟನ್ ಶಮಂತ್ ಮಾತನಾಡಿ, ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ್ ರವರು ಆ.11 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಹೊರಟು ಬೆಳಿಗ್ಗೆ 11 ಕ್ಕೆ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 11.20 ಕ್ಕೆ ವಿಮಾನ ಪ್ರಯಾಣಿಕರೊಂದಿಗೆ ಶಿವಮೊಗ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 12.15 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಯೋಜನೆ ಇದೆ ಎಂದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ(ಪ್ರಭಾರ) ಮೇಘನಾ ಆರ್, ಶಿವಮೊಗ್ಗ ಎಸಿ ರವಿಚಂದ್ರನ್‍ನಾಯಕ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಸಂಪತ್‍ಕುಮಾರ್ ಪಿಂಗಳೆ, ಪೊಲೀಸ್ ಪಡೆ ಅಸಿಸ್ಟೆಂಟ್ ಕಮಾಂಡೆಂಟ್ ಚಂದ್ರಶೇಖರ್, ಕೆಎಸ್‍ಐಐಡಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago