Categories: ShikaripuraShivamogga

ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರಧಾರೆ ಸರ್ವರಿಗೂ ದಾರಿದೀಪ ; ರಂಭಾಪುರಿ ಶ್ರೀಗಳು

ಶಿಕಾರಿಪುರ : ಜ್ಞಾನ ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಅಂತರಂಗ ಮತ್ತು ಬಹಿರಂಗ ಪರಿಶುದ್ಧಗೊಳಿಸುವ ಶಕ್ತಿ ಶ್ರೀ ಗುರುವಿಗೆ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ವಿಚಾರ ಧಾರೆ ಸರ್ವರಿಗೂ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಕಡೇನಂದಿಹಳ್ಳಿ ಕ್ಷೇತ್ರದ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಜರುಗಿದ 36 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುತ್ಥಳಿ ಅನಾವರಣ ಮಹಾಮಸ್ತಕಾಭಿಷೇಕ ಪುಷ್ಪಾರ್ಚನೆ ನೆರವೇರಿಸಿದ ನಂತರ ಜರುಗಿದ ಧರ್ಮ ಸಂಸ್ಕೃತಿ ಪುನಶ್ಚೇತನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಂಸ್ಕಾರ ಸಂಸ್ಕೃತಿಗಳ ಮೂಲಕ ಅಂಗ ಅವಗುಣಗಳನ್ನು ದೂರ ಮಾಡಿ ಲಿಂಗ ಗುಣ ಬೆಳೆಸಲು ಶ್ರಮಿಸಿದವರು ರೇಣುಕಾಚಾರ್ಯರು. ಜೀವಾತ್ಮ ಪರಮಾತ್ಮನಾಗುವ ಅಂಗ ಲಿಂಗವಾಗುವ ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಬೋಧಿಸಿ ಜೀವನ ಉತ್ಕರ್ಷತೆಗೆ ಕಾರಣರಾದವರು ರೇಣುಕಾಚಾರ್ಯರು. ಗಂಡು ಹೆಣ್ಣು ಉಚ್ಛ ನೀಚ ಮತ್ತು ಬಡವ ಬಲ್ಲಿದ ಎನ್ನದೇ ಎಲ್ಲರ ಶ್ರೇಯಸ್ಸಿಗಾಗಿ ಶ್ರಮಿಸಿದ್ದನ್ನು ಮರೆಯಲಾಗದು. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಶಿವಜ್ಞಾನದ ಅರಿವು ಮೂಡಿಸುವುದು ಮುಖ್ಯವೆಂದು ಆರೋಗ್ಯ ಪೂರ್ಣ ಸಮಾಜಕ್ಕೆ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಇಂಥ ಭವ್ಯ ಸುಂದರ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುತ್ಥಳಿ ನಿರ್ಮಿಸಿ ಲೋಕಾರ್ಪಣೆಗೈದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾಡಿದ ಸತ್ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ಹರುಷ ವ್ಯಕ್ತಪಡಿಸಿ ಶ್ರೀಗಳವರಿಗೆ ”ಶಿವ ಪೂಜಾ ತಪೋರತ್ನ” ಪ್ರಶಸ್ತಿ ಚಿನ್ನದುಂಗುರ ಮತ್ತು ರೇಶ್ಮೆ ಮಡಿ ಹೊದಿಸಿ ಫಲ ಪುಷ್ಪವಿತ್ತು ಜಗದ್ಗುರುಗಳು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ “ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದ ಬಿ.ವೈ.ರಾಘವೇಂದ್ರ ಕೃತಜ್ಞತಾ ಪೂರ್ವಕ ಮಾತುಗಳನ್ನಾಡಿದರು.

ಕಾರ್ಕಳದ ಶಿಲ್ಪಿ ಕೃಷ್ಣಾ ಆಚಾರ್ಯ, ಶಿವಮೊಗ್ಗ ಶಿಲ್ಪಿ ಜೀವನ್ ಕಲಾಸನ್ನಿಧಿ, ಶಿಕಾರಿಪುರ ಪ್ರಥಮ ದರ್ಜೆ ಗುತ್ತಿಗೆದಾರ ದೇವೇಂದ್ರಪ್ಪ ಇವರಿಗೆ ಪ್ರಶಸ್ತಿ ಮತ್ತು ಗುರುರಕ್ಷೆಯಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಬಿ.ಜೆ.ಪಿ. ಧುರೀಣ ಕೆ.ಎಸ್. ಗುರುಮೂರ್ತಿ ಮತ್ತು ಹೆಚ್.ಬಿ. ಬಳಿಗಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ನೇತೃತ್ವ ವಹಿಸಿದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಸರ್ವರ ಸಹಕಾರ ಮತ್ತು ಶ್ರೀ ರಂಭಾಪುರಿ ಜಗದ್ಗುರುಗಳವರ ಆಶೀರ್ವಾದದಿಂದ ಎಲ್ಲಾ ಕಾರ್ಯಗಳು ಯಶಸ್ವಿಯಾಗಿ ಜರುಗಿದ್ದಕ್ಕೆ ಹರುಷ ವ್ಯಕ್ತಪಡಿಸಿದರು.

ಈ ಪವಿತ್ರ ಸಮಾರಂಭದಲ್ಲಿ ಕನ್ನೂರು-ಸಿಂಧನೂರು ಸೋಮನಾಥ ಶ್ರೀ, ಚನ್ನಗಿರಿ ಕೇದಾರ ಶಿವಶಾಂತವೀರ ಶ್ರೀ, ಹಾರನಹಳ್ಳಿ ಶಿವಯೋಗಿ ಶ್ರೀ, ಕಾರ್ಜುವಳ್ಳಿ ಸದಾಶಿವ ಶ್ರೀ, ಸಂಗೊಳ್ಳಿ ಗುರುಲಿಂಗ ಶ್ರೀಗಳು, ಕಡೆನಂದಿಹಳ್ಳಿ ವೀರಭದ್ರ ಶ್ರೀಗಳು ಸೇರಿದಂತೆ ಹಲವಾರು ಮಠಾಧೀಶರು ಉಪಸ್ಥಿತರಿದ್ದರು. ಶಿಕ್ಷಕ ನಾಗರಾಜ ಹುಲ್ಲಿನಕೊಪ್ಪ ಸ್ವಾಗತಿಸಿದರು. ಸವಣೂರಿನ ಡಾ|| ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.ಶಾಂತಾ ಅನಂದ ಇವರಿಂದ ಪ್ರಾರ್ಥನೆ ನಡೆಯಿತು.

ಕಾರ್ಯಕ್ರಮ ನಂತರ ಜ್ಞಾನೇಶ್ವರ ಬಳ್ಳಾರಿ, ಮೆಹಬೂಬ್ ಸಾಬ್ ಹರ್ಲಾಪುರ ಇವರಿಂದ ಸಾಂಸ್ಕೃತಿಕ ಸಂಗೀತ ಸೌರಭ ಜರುಗಿತು. ಕಾರ್ಯಕ್ರಮಕ್ಕೂ ಮುನ್ನ 36 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಮೂರ್ತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಲೋಕಾರ್ಪಣೆ ಮಾಡಿದರು. ನಂತರ ಪುಷ್ಪಾರ್ಚನೆ ಅದ್ದೂರಿಯಾಗಿ ಜರುಗಿತು.

Malnad Times

Recent Posts

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

14 mins ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

3 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

10 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

20 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago