ಸಚಿವ‌ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

0 979

ಶಿವಮೊಗ್ಗ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು (Thumakur) ತಾಲ್ಲೂಕಿನ ನಂದಿಹಳ್ಳಿ ಬಳಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.

ಕಾರು ಮತ್ತು ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧು ಬಂಗಾರಪ್ಪ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು.

ಇನ್ನು ಈ ಘಟನೆ ತುಮಕೂರಿನ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave A Reply

Your email address will not be published.

error: Content is protected !!