Categories: Shivamogga

ಸಮಾಜಮುಖಿ ಕೆಲಸಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ

ಶಿವಮೊಗ್ಗ: ಸಮಾಜಮುಖಿ ಚಟುವಟಿಕೆಗಳಲ್ಲಿ ಮಹಿಳಾ ಸಂಘ ಸಂಸ್ಥೆಗಳು ಅಪಾರ ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ. ಅಗತ್ಯ ಇರುವವರಿಗೆ ನೆರವು ಒದಗಿಸುವ ಕೆಲಸ ಸಾರ್ಥಕ ಭಾವ ಮೂಡಿಸುತ್ತದೆ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು.


ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜೆಸಿಐ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದು, ಸಾಮಾಜಿಕ ಕಳಕಳಿಯುಳ್ಳ ಸೇವಾ ಕ್ಷೇತ್ರದಲ್ಲೂ ಪರಿಣಾಮಕಾರಿ ಕೆಲಸ ಮಾಡುತ್ತಿದ್ದಾರೆ. ಯುವ ಸಮೂಹಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದು, ಇದರಿಂದ ಸಾವಿರಾರು ಜನರಿಗೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದರು.


ಜೆಸಿಐ ಸಂಸ್ಥೆ ವತಿಯಿಂದ ಕಮಲ ಪತ್ರ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜತೆಯಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ. ಜೆಸಿಐ ಸಂಸ್ಥೆಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು. ಸಂಘಟನಾ ಕೌಶಲ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.


ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಮಾತನಾಡಿ, ಜೆಸಿಐ ಸಪ್ತಾಹ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಎಲ್ಲ ಸದಸ್ಯರ ಸಹಕಾರದಿಂದ ಸೇವಾ ಚಟುವಟಿಕೆಗಳು ಉತ್ತಮವಾಗಿ ಪೂರ್ಣಗೊಂಡಿದೆ. ಜೆಸಿಐ ಭಾವನಾ ಸಂಸ್ಥೆ ನಡೆಸಿದ ಕಾರ್ಯವು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.


ಶಿಲ್ಪಿ ಕಾಶೀನಾಥ್, ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ವೈದ್ಯೆ ಡಾ. ಲಲಿತಾ ಭರತ್, ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ, ಭವಾನಿ, ಸೌಮ್ಯ ಹರಳಪ್ಪ ಅವರನ್ನು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.


ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಜೆಸಿ ಗೌರೀಶ್ ಭಾರ್ಗವ್, ಜೆಸಿ ಸಪ್ತಾಹ ಸಂಚಾಲಕ ಪ್ರದೀಪ್, ಶಾರದಾ ಶೇಷಗಿರಿಗೌಡ, ಸುಗುಣಾ ಸತೀಶ್, ಕರಿಬಸಮ್ಮ, ಜೆಸಿಐ ಶಿವಮೊಗ್ಗ ಭಾವನಾ ಕಾರ್ಯದಶಿ ಕವಿತಾ ಜೋಯೀಸ್ ಸುನೀಲ್ ಮತ್ತಿತರರು ಉಪಸ್ಥಿತರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago