ಸರ್ವಧರ್ಮ ಸೌಹಾರ್ದ ಟ್ರಸ್ಟ್‌ನ ನೂತನ ಕಾರ್ಯಾಲಯ ಕಾರ್ಯಾರಂಭ

ಹೊಸನಗರ : ಎಲ್ಲಾ ವರ್ಗದ ನಿರ್ಗತಿಕರ ನೊಂದವರ ಕಣ್ಣೀರು ಒರೆಸುವ ಮತ್ತು ಸಮಾಜಮುಖಿ ಕಾಯಕ ಮಾಡುವ ಸದುದ್ದೇಶದಿಂದ ಸಂಘಟನೆ ರಚಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ತ್ರಿಣಿವೆ ಜಯರಾಂ ಶೆಟ್ಟಿ ತಿಳಿಸಿದರು.

ಪಟ್ಟಣದ ಸಂತೆ ಮಾರುಕಟ್ಟೆ ಎದುರು ಸರ್ವ ಧರ್ಮ ಸೌಹಾರ್ದ ಟ್ರಸ್ಟ್ ವತಿಯಿಂದ ನೂತನ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ತಾಲ್ಲೂಕಿನಾದ್ಯಂತ ಸಮಾಜದಲ್ಲಿ ವಿವಿಧ ರೀತಿಯಲ್ಲಿ ನೊಂದ ಜನತೆಯ ಸೇವೆ ಮಾಡುವ ಸದುದ್ದೇಶದಿಂದ ಸಂಘಟನೆಯನ್ನು ರಚನೆ ಮಾಡಲಾಗಿದ್ದು ಸಂಘದ ಸದಸ್ಯರು ಈ ಬಗ್ಗೆ ಯಾವುದೇ ಅಂಜಿಕೆ ಇಲ್ಲದೆ ನೊಂದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.

ಈ ಹಿಂದೆ ತಾವು ಬೇರೆ ಬೇರೆ ರೀತಿಯಲ್ಲಿ ಸಮಾಜದ ಸೇವೆ ಸಲ್ಲಿಸಿ ನೊಂದವರ ಸಹಾಯಕ್ಕೆ ತೊಡಗಿದ್ದು, ಇದುವರೆಗೂ ಯಾವುದೇ ನೊಂದಾಯಿತ ಸಂಘಟನೆಯಲ್ಲಿ ಕೆಲಸ ಮಾಡಿಲ್ಲ ಆದರೂ ತಾಲ್ಲೂಕಿನ ಅನೇಕ ಹಿರಿಯರ ಸಲಹೆಯಂತೆ ಇಂದು ಸರ್ವ ಧರ್ಮ ಸೌಹಾರ್ದ ಸಹಕಾರ ಸಂಘಕ್ಕೆ ಚಾಲನೆ ನೀಡಲಾಗಿದ್ದು, ಕಡು ಬಡವರ, ಅಂಗವಿಕಲರ, ಕ್ಯಾನ್ಸರ್ ನಿಂದ ಬಳಲುವವರ ಸೇವೆಗೆ ಪಕ್ಷಾತೀತವಾಗಿ ಜಾತ್ಯಾತೀತವಾಗಿ ಸದಸ್ಯರು ಇಂದಿನಿಂದಲೇ ಕಾರ್ಯ ಚಟುವಟಿಕೆಗಳನ್ನು ನಡೆಸಲು ಮುಂದಾಗಬೇಕು ನಮ್ಮ ಸರ್ವ ಧರ್ಮ ಸೌಹಾರ್ದ ಟ್ರಸ್ಟ್‌ಗೆ ಪಕ್ಷಾತೀತವಾಗಿ ಜಾತ್ಯಾತೀತವಾಗಿ ಬೆಂಬಲ ನೀಡಿದ್ದಾರೆ ಇವರಿಗೆ ನಮ್ಮ ಸಂಘಟನೆಯು ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.               

  
ಬಿಜೆಪಿ ಮುಖಂಡ ದೇವಾನಂದ ಮಾತನಾಡಿ, ಮುಂದಿನ ನಿಮ್ಮ ಸರ್ವ ಧರ್ಮ ಸೌಹಾರ್ದ ಟ್ರಸ್ಟ್‌ನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರವರು ಆಗಮಿಸುವುದಾದರೆ, ದಿನಾಂಕ ಸೂಚಿಸಿದರೆ ಆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರನ್ನಾಗಲಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರನ್ನ ಕರೆಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಯತ್ನಿಸುತ್ತೇನೆ. ಈ ಸಂಘಟನೆಯ ಹೆಸರಿನಲ್ಲಿರುವಂತೆ ಎಲ್ಲಾ ಜನಾಂಗದ ಏಳಿಗೆಗೆ ಬೇಕಾದ ಎಲ್ಲಾ ರೀತಿಯ ಸಹಕಾರ ಅಗತ್ಯವಾಗಿದೆ. ನಮ್ಮ ದೇಶದಲ್ಲಿ ಎಲ್ಲಾ ಜನಾಂಗದವರಿದ್ದು ಎಲ್ಲರೂ ನಮ್ಮ ದೇಶವನ್ನು ಪ್ರೀತಿಸುವಂತೆ ಆಗಬೇಕು ನಮ್ಮ ದೇಶದಲ್ಲಿ ಅಬ್ದುಲ್ ಕಲಾಂ ಜಾರ್ಜ್ ಫರ್ನಾಂಡಿಸ್ ಸೇರಿದಂತೆ ಎಲ್ಲಾ ಜನಾಂಗದವರು ಇದ್ದರು ಇಂತಹ ಮಹಾತ್ಮರ ಸ್ಮರಣೆ ನಮ್ಮಲ್ಲಿರಬೇಕು ಎಂದು ತಿಳಿಸಿದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಶಿವಯೋಗಿ ಮಹಾಸ್ವಾಮಿಗಳು ನೆರವೇರಿಸಿದರು.

ಮುಖ್ಯ ಅಥಿತಿಗಳಾಗಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ|| ಹೇಮoತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸೇರಿದಂತೆ ಸಂಘದ ಉಪಾಧ್ಯಕ್ಷರಾದ ಆನಂದ, ಉಪಾಧ್ಯಕ್ಷೆ ರಾಧಿಕಾ ರತ್ನಾಕರ್ ಶೆಟ್ಟಿ, ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ಪುಷ್ಪಾವತಿ, ಖಜಾಂಚಿ ಅಶೋಕ್, ನಿರ್ದೇಶಕರು ನಾಗೇಶ್, ನಿರ್ದೇಶಕರು ಶೈಲಜಾ,  ನಿರ್ದೇಶಕರು ಚಂದ್ರಶೇಖರ್ ಹಾಜರಿದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

4 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

6 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

17 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

19 hours ago